Ad Widget

“ಸಮೀಕ್ಷೆಯಲ್ಲಿ ಅರೆಭಾಷೆ ಎಂದು ನಮೂದಿಸಿ” : ಸದಾನಂದ ಮಾವಜಿ

ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ ಹಮ್ಮಿಕೊಂಡ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗರ ಸಭಾ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡುತ್ತಿದ್ದರು. ಮುಂದುವರಿದು ಮಾತನಾಡಿದ ಅವರು ಈ ಸಮೀಕ್ಷೆಯಲ್ಲಿ ಅರೆಭಾಷಿಕರು ಎಲ್ಲೇ ವಾಸಿಸುತ್ತಿದ್ದರು ಮಾತೃಭಾಷೆ ಅರೆಭಾಷೆ ಎಂದೇ ನಮೂದಿಸಬೇಕು ಎಂದು ಹೇಳಿದರು.
ಸಮೀಕ್ಷೆಯ ಬಗ್ಗೆ ಮಾತನಾಡಿದ ಸಮೀಕ್ಷೆಯ ಜಿಲ್ಲಾ ತರಬೇತುದಾರರಾಗಿರುವ ಮೈಸೂರಿನ ಉಪನ್ಯಾಸಕ ಶ್ರೀ ಪಟ್ಟಡ ಶಿವಕುಮಾರ್ ಇವರು ಸಮೀಕ್ಷೆಯ ಬಗ್ಗೆ ಮಾಹಿತಿ ನೀಡುತ್ತಾ ಇದು ಜಾತಿ ಗಣತಿ ಆಗಿರುವುದಿಲ್ಲ ಬದಲಿಗೆ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಮಾಹಿತಿ ಸಂಗ್ರಹಣಾ ಸಮೀಕ್ಷೆ ಆಗಿದೆ. ಇದರಿಂದ ಲಭಿಸುವ ಮಾಹಿತಿಯು ಸರ್ಕಾರದ ಯೋಜನೆಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದು ಸಮೀಕ್ಷೆ ಸಂದರ್ಭದಲ್ಲಿ ಎಲ್ಲರೂ ಪ್ರಾಮಾಣಿಕವಾದ ಸತ್ಯಾಂಶವುಳ್ಳ ಮಾಹಿತಿಯನ್ನು ನೀಡಿ ಸಹಕರಿಸಿದರೆ ಸರಿಯಾದ ದತ್ತಾಂಶ ಸಂಗ್ರಹಣೆ ಸಾಧ್ಯ ಎಂದು ನುಡಿದರು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ ಅವರು ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಆನಂದ ಕರಂದ್ಲಾಜೆ ಭಾಗವಹಿಸಿ ಅಭಿಪ್ರಾಯಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರಾದ ಎಂ. ನಾಗರಾಜು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಕೋನಪ್ಪ ರೆಡ್ಡಿ ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಪೈಕೇರ ಮನೋಹರ ಮಾದಪ್ಪ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಯಾನೆ ಗೌಡರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ ಶ್ರೀ ಲೋಕಯ್ಯ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಜಿಲ್ಲಾ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಡಿ.ಬಿ. ಬಾಲಕೃಷ್ಣ ಗೌಡ, ಸುಳ್ಯ ತಾಲೂಕು ಗೌಡರ ಯವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಪಿ.ಎಸ್. ಗಂಗಾಧರ, ಪುತ್ತೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಶ್ರೀ ರವಿ ಮುಂಗ್ಲಿಮನೆ, ಕಡಬ ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಕಾರ್ಯದರ್ಶಿಯವರಾದ ಗಣೇಶ್ ಗೌಡ, ಬಂಟ್ಟಾಳ ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಶ್ರೀ ವಿಶ್ವನಾಥ ಗೌಡ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಒಕ್ಕಲಿಗ ಹಾಗೂ ಗೌಡರ ಸಂಘದ ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಗೌಡ ವಿದ್ಯಾ ಸಂಘದ ಪದಾಧಿಕಾರಿಗಳು, ಕೊಡಗು ಗೌಡ ಸಮಾಜಗಳ ಒಕ್ಕೂಟದ ಪದಾಧಿಕಾರಿಗಳ  ಉಪಸ್ಥಿತರಿದ್ದರು.
ಅರೆಭಾಷೆ ಅಕಾಡೆಮಿ ಸದಸ್ಯರಾದ ಶ್ರೀ ಚಂದ್ರಶೇಖರ ಪೇರಾಲು ಪ್ರಾಸ್ತಾವಿಕ ಮಾತುಗಳನ್ನಾಡಿ ಸಭೆಯ ಉದ್ದೇಶವನ್ನು ತಿಳಿಸಿದರು. ಡಾ| ಜ್ಞಾನೇಶ್ ಎನ್. ಎ ಸ್ವಾಗತಿಸಿದರು. ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಹಾಗೂ ಶ್ರೀಮತಿ ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಲತಾ ಪ್ರಸಾದ್ ಕುದ್ಪಾಜೆ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading