Ad Widget

ಸುಳ್ಯ : ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

ಭಾರತೀಯ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ವಿಶ್ವಕರ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸೆ. 17ರಂದು ಹಳೆಗೇಟಿನ ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ ತಿಲಕ ಭವನದಲ್ಲಿ ನಡೆಯಿತು.

. . . . . . . . .

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಬಿಎಂಎಸ್ ಸಂಯೋಜಿತ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ಯುವರ ಸಭಾಧ್ಯಕ್ಷತೆ ಯಲ್ಲಿ ನಡೆಯಿತು. ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ರೋಹಿತಾಶ್ವ ಕಾರ್ಯಕ್ರಮದ ಬಗ್ಗೆ ಭೌದಿಕ್ ನೀಡಿದರು. ಮುಖ್ಯ ಅಭ್ಯಾಗತರಾಗಿದ್ದ ಗೋಪಾಲಕೃಷ್ಣ ಭಟ್ ಶುಭ ಹಾರೈಸಿದರು. ಕಟ್ಟಡ ನಿರ್ಮಾಣ ಹಾಗೂ ಇತರ ನಿರ್ಮಾಣಗಳ ಅಧ್ಯಕ್ಷರಾದ ಮಧುಸೂದನ್ ಶುಭ ಹಾರೈಸಿದರು. ರಬ್ಬರ್ ಟ್ಯಾಪರ್ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್, ದ.ಕ.ಜಿಲ್ಲಾ ಬಿಎಂಎಸ್ ಮಾಜಿ ಅಧ್ಯಕ್ಷರಾದ ಭಾಸ್ಕರ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.‌

. . . . . . .

ಆಟೋ ರಿಕ್ಷಾ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.‌ಎಂ., ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ ಪೆರಾಜೆ, ಜತೆ ಕಾರ್ಯದರ್ಶಿ ಸುರೇಂದ್ರ ಕಾಮತ್, ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ನಿರ್ದೇಶಕರುಗಳಾದ ರೋಹಿತ್, ಜಗದೀಶ್, ಜನಾರ್ಧನ, ವಿಶ್ವನಾಥ, ಭಾಸ್ಕರ, ಕರುಣಾಕರ ಜಾಲ್ಸೂರು, ಕಟ್ಟಡ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ತಾಲೂಕು ಕಾರ್ಯದರ್ಶಿ ಅನಿಲ್ ಕುಮಾರ್ ಹಾಗೂ ಕೋಶಾಧಿಕಾರಿ ದಿನೇಶ್ ಹಾಗೂ ರಬ್ಬರ್ ಟ್ಯಾಪರ್ ಯೂನಿಯನ್ ಸದಸ್ಯರು ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading