Ad Widget

ಸೆ.20 : ಸುಳ್ಯದಲ್ಲಿ ಯುವ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಮನವಿ

“ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆಯೆಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ  ರಾಹುಲ್ ಗಾಂಧಿಯವರು ಇದರ ವಿರುಧ್ದ ಜನಜಾಗೃತಿ ಮೂಡಿಸುತ್ತಿದ್ದು, ಇದಕ್ಕೆ  ಬೆಂಬಲ ನೀಡುವ ಸಲುವಾಗಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಸೆ.20 ರಂದು ನಡೆಯಲಿದೆ.
ಈ ಮೆರವಣಿಗೆ ಸುಳ್ಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ(ಜ್ಯೋತಿ ಸರ್ಕಲ್) ಬಳಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದವರೆಗೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡ, ಖ್ಯಾತ ವಾಗ್ಮಿ  ಎಂ.ಜಿ ಹೆಗಡೆ ಮಂಗಳೂರು ಪ್ರಧಾನ ಭಾಷಣ ಮಾಡಲಿದ್ದಾರೆ.
ಈ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ನಾಮನಿರ್ದೇಶಿತ ಸದಸ್ಯರುಗಳು, ಹಾಲೀ ಮತ್ತು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ನ ಎಲ್ಲಾ ಸದಸ್ಯರು, ಸಂವಿಧಾನ ಪ್ರೇಮಿಗಳು, ಚಿಂತಕರು, ಮತದಾರರು ಭಾಗವಹಿಸಿ ಜಾಗೃತರಾಗಿ ಪವಿತ್ರ ಮತದಾನದ ಮೌಲ್ಯಗಳನ್ನು ಎತ್ತಿಹಿಡಿದು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಒಗ್ಗಟ್ಟಾಗಬೇಕಿದೆ ಎಂದು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚೇತನ್ ಕಜೆಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading