Ad Widget

ಐನೆಕಿದು : ಸ.ಹಿ.ಪ್ರಾ ಶಾಲೆಯಲ್ಲಿ “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ”ದ ಬಗ್ಗೆ ಮಾಹಿತಿ ಕಾರ್ಯಾಗಾರ

ಐನೆಕಿದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.13 ರಂದು “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ”ದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಕುಮಾರ್ ಮೂಲೆಮಜಲು ಆಗಮಿಸಿದ್ದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವಿದ್ಯಾಕುಮಾರಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಐನೆಕಿದು ಆರೋಗ್ಯ ಇಲಾಖೆ ಉಪ ಕೇಂದ್ರದ ಸಿ.ಹೆಚ್.ಓ ಶ್ರೀಮತಿ ಶಾಂತಮ್ಮ, ಶಾಲಾ ದಾನಿಗಳಾದ ಕಿಶೋರ್ ಕುಮಾರ್ ಕೂಜುಗೋಡು, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಕುಮಾರಿ.ಕೆ ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಈ ಕಾರ್ಯಾಗಾರದಲ್ಲಿ ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading