Ad Widget

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ “ನದಿ ಪೂಜನ ಕಾರ್ಯಕ್ರಮ”

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.22 ರಂದು ಸುಬ್ರಹ್ಮಣ್ಯದ ಕುಮಾರಧಾರದ ಬಳಿ “ನದಿ ಪೂಜನ ಕಾರ್ಯಕ್ರಮ” ನಡೆಯಿತು.
ಶೇಷಪ್ಪ ಅಜಿಲ ಕೋಟೆಬೈಲು ದೀಪ ಪ್ರಜ್ವಲನೆಯ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಸುಬ್ರಹ್ಮಣ್ಯದ ಶ್ರೀವಲ್ಲಿ ಭಜನಾ ತಂಡ ಹಾಗೂ ಸುಖಪ್ರಧಾ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ರವರು “ನದಿ ಪೂಜನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಮೌಲ್ಯ ಮತ್ತು ಈ ಬಗ್ಗೆ ನಮ್ಮ ಮೇಲಿರುವ ಹೊಣೆ”ಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ಹೊಸೊಳಿಕೆ, ಅಶೋಕ್ ಮೂಲೆಮಜಲು, ಡಾ.ರವಿ ಕಕ್ಕೆಪದವು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಧನಂಜಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನದಿ ಪೂಜನದ ಪ್ರಯುಕ್ತ ಕುಮಾರಧಾರ ನದಿಯಲ್ಲಿ ಬಾಗಿನ ಬಿಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರು, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರುಗಳು, ಸ್ಥಳೀಯ ಸೊಸೈಟಿ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು, ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಆಚಾರ್ಯ ಪೈಲಾಜೆ ಕಾರ್ಯಕ್ರಮ ನಿರೂಪಿಸಿದರು.
ವಂದೇ ಮಾತರಂ ಗೀತೆಯ ಬಳಿಕ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು ಧನ್ಯವಾದ ಸಮರ್ಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading