Ad Widget

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ನಿವಾರಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಬ್ರಹ್ಮಣ್ಯ ಸೆಪ್ಟೆಂಬರ್ 22 : ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ “ಇಂದಿನ ದಿನಗಳಲ್ಲಿ ಪುಟಾಣಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ ಅವರ ಬೆಳವಣಿಗೆಯಲ್ಲಿ ವಿಶೇಷ ಪಾತ್ರವಹಿಸುವುದು ಪೋಷಕರ ಪಾತ್ರವಾಗಿದೆ. ಹಿಂದಿನ ಕಾಲದಲ್ಲಿ ನಾವೆಲ್ಲ ಸ್ವತಃ ಬೆಳೆದ ಭತ್ತದಿಂದ ತಯಾರಿಸಿದ ಅಕ್ಕಿ, ತರಕಾರಿಗಳಿಂದ ಪೌಷ್ಟಿಕ ಆಹಾರವನ್ನು ಪಡೆದು ದಷ್ಟಪುಷ್ಟರಾಗಿದ್ದುಕೊಂಡು ಉತ್ತಮ ಆರೋಗ್ಯದಿಂದ ಇರುತ್ತಿದ್ದೆವು. ಆದರೆ ಇಂದು ಎಲ್ಲಾ ರಾಸಾಯನಿಕ ಆಹಾರ ಪದಾರ್ಥಗಳನ್ನು  ಸೇವಿಸುತ್ತಿರುವುದರಿಂದ ಅಪೌಷ್ಟಿಕತೆಯ ಕೊರತೆ ಎದ್ದು ಕಾಣುತ್ತಿದೆ. ಮಾರ್ಕೆಟಿನಿಂದ ಖರೀದಿಸುವ ಆಹಾರ ಪದಾರ್ಥಗಳಲ್ಲಿ ಪೌಷ್ಟಿಕತೆ ಅಂಶವಾಗಲಿ ಅಥವಾ ಇನ್ನಿತರ ವಿಟಮಿನ್ ಅಂಶಗಳಾಗಲಿ ಇರದೆ ಇದು ಮಕ್ಕಳ ಬೆಳವಣಿಗೆ ಕುಂಠಿತವಾಗಿರುವುದು ಕಂಡುಬರುತ್ತದೆ. ಈ ನಿಟ್ಟಿನಲ್ಲಿ ಅಪೌಷ್ಟಿಕತೆಯ ನಿವಾರಣೆಯೊಂದಿಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯೊಂದಿಗೆ ಈ ತಿಂಗಳು ಪೂರ್ತಿಯಾಗಿ ದೇಶದ ಎಲ್ಲ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಲ್ಲಿ ಆಚರಣೆ ಮಾಡುತ್ತಿರುವುದು ತುಂಬಾ ಉತ್ತಮ ಕಾರ್ಯವಾಗಿದೆ” ಎಂದು ನುಡಿದರು.
ಕಾರ್ಯಕ್ರಮವನ್ನು ಅಂಗನವಾಡಿ ಬಾಲವಿಕಾಸ   ಸಮಿತಿಯ ಅಧ್ಯಕ್ಷೆ ಶ್ವೇತಾ ಉದ್ಘಾಟಿಸಿದರು.
ಅಂಗನವಾಡಿ ಶಿಕ್ಷಕಿ ಉಷಾ ಎಂ.ಎ. ಸ್ವಾಗತಿಸಿದರು.
ನಂತರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಉಮರ್ ಖಾನ್ ಅವರು ಗರ್ಭಿಣಿ ಸ್ತ್ರೀಯರ ಆರೋಗ್ಯದ ಬಗ್ಗೆ ಅವರು ಆಹಾರ ಸೇವಿಸುತ್ತಿರುವ ಬಗ್ಗೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿರುವ ಮಹತ್ವ ಬಗ್ಗೆ ವಿವರವಾಗಿ ವಿವರಿಸಿದ್ದರು.
ವೇದಿಕೆಯಲ್ಲಿ ಇನ್ನೋರ್ವ ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್, ಸಮುದಾಯ ಆರೋಗ್ಯ ಸುರಕ್ಷಾಧಿಕಾರಿ ಭಾಗ್ಯಶ್ರೀ, ಅಂಗನವಾಡಿ ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ ಆರೋಗ್ಯ ಸುರಕ್ಷಾ ಅಧಿಕಾರಿ ಸುಜಾತ, ಸಂಜೀವಿನಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಒಕ್ಕೂಟದ ಸದಸ್ಯರು ಅಂಗನವಾಡಿ ಪೋಷಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಕೊನೆಯಲ್ಲಿ ಅಂಗನವಾಡಿ ಶಿಕ್ಷಕಿ ಉಷಾ ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading