Ad Widget

ವಳಲಂಬೆ : “ಪಂಜ ಹೋಬಳಿ ಸಾಹಿತ್ಯ ಸಮ್ಮೇಳನ” ನಡೆಸುವ ಬಗ್ಗೆ ಅ.01 ರಂದು ಪೂರ್ವಭಾವಿ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ “ಪಂಜ ಹೋಬಳಿ ಸಾಹಿತ್ಯ ಸಮ್ಮೇಳನ” ನಡೆಸುವ ಬಗ್ಗೆ ಅಕ್ಟೋಬರ್ 01 ಬುಧವಾರದಂದು ಪೂರ್ವಾಹ್ನ 10:30ಕ್ಕೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಕರೆಯಲಾಗಿದ್ದು, ಪಂಜ ಕಂದಾಯ ಹೋಬಳಿಯ ಕೆಲವು ಗ್ರಾಮಗಳು ಕಡಬ ತಾಲೂಕಿಗೆ ಸೇರ್ಪಡೆಗೊಂಡ ಪ್ರಯುಕ್ತ ಸಾಹಿತ್ಯ ವಿಚಾರಗಳಿಗಾಗಿ ಮಡಪ್ಪಾಡಿ, ನೆಲ್ಲೂರು ಕೆಮ್ರಾಜೆ, ಅಮರ ಮೂಡ್ನೂರು, ಕಲ್ಮಡ್ಕ, ಕಳಂಜ, ಬಾಳಿಲ, ಮುರುಳ್ಯ ಗ್ರಾಮಗಳನ್ನು ಒಳಗೊಂಡ ಸಾಹಿತ್ಯಾಸಕ್ತರನ್ನೊಳಗೊಂಡು ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸಮ್ಮೇಳನದ ಆಯೋಜನೆ, ರೂಪುರೇಷೆಗಳ ಬಗ್ಗೆ ಚರ್ಚಿಸಿ ಸಂಬಂಧಪಟ್ಟ ವಿವಿಧ ಸಮಿತಿಗಳನ್ನು ರಚಿಸುವ ಹಿನ್ನೆಲೆಯಲ್ಲಿ ಸಮಾಲೋಚನೆ ಮಾಡುವ ಪ್ರಯುಕ್ತ ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading