Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಪತ್ರಕರ್ತ ಸಂಘದ ದ.ಕ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ

ಸುಬ್ರಹ್ಮಣ್ಯ ಅ.08 : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಅ.08 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ವೇಳೆ ಪತ್ರಕರ್ತರಿಗೆ ನೀಡುವ ಮಣಿಪಾಲ್ ಉಚಿತ ಆರೋಗ್ಯ ಕಾರ್ಡ್ ಅನ್ನು ಅಧ್ಯಕ್ಷರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ನಡುತೋಟ ಅವರಿಗೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಹೆಗಡೆ, ಮಣಿಪಾಲ್ ಆರೋಗ್ಯ ಕಾರ್ಡ್ ಮೇಲ್ವಿಚಾರಕ ಕಾರ್ತಿಕ್ ಉಪಸ್ಥಿತರಿದ್ದರು.
ತದನಂತರ ಜಿಲ್ಲಾಧ್ಯಕ್ಷರು ಶ್ರೀ ಸಂಪುಟ ನರಸಿಂಹ ಸ್ವಾಮಿ  ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸ್ವಾಮೀಜಿಯವರು ಎಲ್ಲರನ್ನು ಶಾಲು ಹೊಂದಿಸಿ ಮಂತ್ರಾಕ್ಷತೆ ನೀಡಿ ಗೌರವಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading