“ಸ್ವಚ್ಛ ನಾಡು ಕಟ್ಟುವಲ್ಲಿ ಯುವಜನರ ಪಾತ್ರ ಮುಖ್ಯ” :  ನಮಿತಾ ಎಲ್ ರೈ ; ಬೆಳ್ಳಾರೆಯಲ್ಲಿ ಪಂಚಸಪ್ತತಿ 75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಇವುಗಳ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ “ಪಂಚಸಪ್ತತಿ 2025”  ಕಾರ್ಯಕ್ರಮವು ಅ. 10ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಿತು.  
ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ  ನಮಿತಾ.ಎಲ್ ರೈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ನೇಹಿತರ ಕಲಾ ಸಂಘ ಅಧ್ಯಕ್ಷರ ವಸಂತ ಗೌಡ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಮಾಯಿಲಪ್ಪ ಜಿ ಸಂಪನ್ಮೂಲ ವ್ಯಕ್ತಿಯಾಗಿ  ಭಾಗವಹಿಸಿ ಸ್ವಚ್ಛತಾ ಅಭಿಯಾನ ಮಾಹಿತಿ ನೀಡಿದರು.
ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮುಡಾಯಿತೋಟ, ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಚಂದ್ರಶೇಖರ ಪನ್ನೆ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ  ಪ್ರದೀಪ್ ಕುಮಾರ್ ರೈ ಪನ್ನೆ, ಜ್ಞಾನದೀಪ ಶಿಕ್ಷಣ ಸಂಸ್ಥೆ ನಿರ್ದೇಶಕ ಉಮೇಶ್ ಮಣಿಕ್ಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ನೇಹಿತರ ಕಲಾ ಸಂಘ ಪೂರ್ವಾಧ್ಯಕ್ಷ ವಸಂತ ಉಲ್ಲಾಸ್ ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ಪಾಟಾಳಿ ಕುರುಂಬುಡೆಲು  ವಂದಿಸಿದರು.
ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading