Ad Widget

ಹರಿಹರ ಪಳ್ಳತ್ತಡ್ಕ : ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಹಾಗೂ ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣ ಕಡಬ ಇವುಗಳ ಸಹಯೋಗದೊಂದಿಗೆ ಅ.12 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ “ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ” ನಡೆಯಿತು.
ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೋ| ಜಯಪ್ರಕಾಶ್.ಆರ್ ಶಿಬಿರದ ಅಧ್ಯಕ್ಷತೆ ವಹಿಸಿದ್ದರು.
ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ರೋ| ಕಿಶೋರ್ ಕುಮಾರ್ ಕೂಜುಗೋಡು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ನೇತ್ರ ಪರಿವೀಕ್ಷಕರಾದ ಎಸ್.ಶಾಂತರಾಜ್, ಕಡಬ ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣದ ಡಾ| ವಿಕಾಸ್.ಎಸ್.ಎಂ, ಖ್ಯಾತ ನೇತ್ರ ತಜ್ಞರಾದ ಡಾ| ಅಶ್ವಿನ್ ಸಾಗರ್, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಹಾಗೂ ಸಚಿನ್ ಕ್ರೀಡಾ ಸಂಘಧ ಅಧ್ಯಕ್ಷರಾದ ಮನೀಷ್ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ಒಟ್ಟು ಸುಮಾರು 100ಕ್ಕೂ ಅಧಿಕ ಜನರು ಈ ಶಿಬಿರದಲ್ಲಿ ಭಾಗವಹಿಸಿದ್ದು, ಅದರಲ್ಲಿ 46 ಜನರಿಗೆ ಕನ್ನಡಕ ವಿತರಣೆ ಹಾಗೂ 7 ಜನರನ್ನು ಕಣ್ಣಿನ ಪೊರೆ ಚಿಕಿತ್ಸೆಗೆ ನಿರ್ದೇಶನ ನೀಡಲಾಗಿದೆ ಎಂದು ಶಿಬಿರದ ಆಯೋಜಕರು ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading