Ad Widget

ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮಕ್ಕೆ ಕವಿಗಳಿಗೆ ಆಹ್ವಾನ

ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ದೀಪಾವಳಿ ಕವಿಗೋಷ್ಠಿ-2025” ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮಕ್ಕೆ ಆಸಕ್ತ ಕವಿಗಳಿಗೆ ಪ್ರೀತಿಯ ಆಹ್ವಾನ. ‘ದೀಪಾವಳಿ ಕವಿಗೋಷ್ಠಿ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕವಿಗಳಿಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ಇರುವ ಕವಿಗಳು 9845309239 ಈ ಸಂಖ್ಯೆಗೆ ಫೋನಾಯಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚಂದನ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಮತ್ತು ಸಾಹಿತಿ ಹಾಗೂ ಜ್ಯೋತಿಷ್ಯರಾದ ಶ್ರೀ ಎಚ್. ಭೀಮರಾವ್ ವಾಷ್ಠರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading