Ad Widget

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸಾಧಕರಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಅಕ್ಟೋಬರ್ 24 : ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್ ವತಿಯಿಂದ ಖ್ಯಾತ ಉದ್ಯಮಿ, ಸಮಾಜಸೇವಕ, ಚಲನಚಿತ್ರ ನಟ, ನಿರ್ಮಾಪಕ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಮುಲ್ಕಿಯ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸುಬ್ರಹ್ಮಣ್ಯದ ದೋಣಿಮಕ್ಕಿ ಕುಕ್ಕೆ ಶ್ರೀ ನಿಲಯದ  ಸಭಾಂಗಣದಲ್ಲಿ ಶುಕ್ರವಾರ ಗೌರವಿಸಲಾಯಿತು.
“ಡಾ.ರಾಜೇಶ್ ಶೇಖರ ಕೋಟ್ಯಾನ್ ಅವರು ಸಮಾಜಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ ಹಾಗೂ ಚಲನಚಿತ್ರ ರಂಗದಲ್ಲಿ ಸಲ್ಲಿಸಿದ ಸೇವೆ ಮತ್ತು ಬಡವರಿಗಾಗಿ ಸದಾ ದುಡಿಯುತ್ತಿರುವ ಅವರಿಗೆ ಈ ಗೌರವಾರ್ಪಣೆ ಮಾಡಲಾಗಿದೆ” ಎಂದು ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ.ರವಿ ಕಕ್ಕೆಪದವು ತಿಳಿಸಿದರು.
ರವಿ ಕಕ್ಕೆಪದವು ಅವರ  ದೋಣಿಮಕ್ಕಿಯ ಕುಕ್ಕೆಶ್ರೀ ನಿಲಯದಲ್ಲಿ ಬೆಳಿಗ್ಗೆ ಗಣಹೋಮ ಹಾಗೂ ಮಧ್ಯಾಹ್ನ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು.
ಇದೇ ಸಂದರ್ಭದಲ್ಲಿ ಬಡವರ ಸೇವೆಯಲ್ಲಿ ಸದಾ ನಿರತರಾಗಿರುವ, ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ರಕ್ತದಾನ ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿರುವ ಬೆಳ್ತಂಗಡಿ ಮಚ್ಚಿನದವರಾದ ನೆತ್ತರ ಗೋಪಾಲಕೃಷ್ಣ ಶೆಟ್ಟಿ ಹಾಗೂ ಆಪತ್ತು ರಕ್ಷಕ, ಬಡವರ ಬಂಧು ಎಂದೆ ಚಿರಪರಿಚತರಾಗಿರುವ ಬೆಳ್ತಂಗಡಿ ಕಣಿಯೂರಿನ ಅಶೋಕ ಕುಲಾಲ್ ಅವರುಗಳನ್ನು ಕೂಡ ಅಭಿನಂದಿಸಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಡಾ.ರವಿ ಕಕ್ಕೆಪದವು ಅವರ ಧರ್ಮಪತ್ನಿ ಗೀತಾ ರವಿ ಕಕ್ಕೆಪದವು,
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ, ರೋಟರಿ ಕ್ಲಬ್ ಸುಬ್ರಹ್ಮಣ್ಯದ ಅಧ್ಯಕ್ಷ ಜಯಪ್ರಕಾಶ್, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವೆಂಕಟೇಶ ಹೆಚ್.ಎಲ್, ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಗೋಪಾಲ್ ಎಣ್ಣೆಮಜಲು, ಸುಬ್ರಹ್ಮಣ್ಯದ ಉದ್ಯಮಿ ಯಜ್ಞೇಶ್ ಆಚಾರ್, ಪುತ್ತೂರು ಅಕ್ಷಯ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಜಯಂತ ನಡುಬೈಲು, ಮುಲ್ಕಿ ಬಿಲ್ಲವ ಸಂಘದ ಪದಾಧಿಕಾರಿಗಳಾದ ಸಂತೋಷ್, ದಿನೇಶ್, ಬಳ್ಪದ  ಉಮೇಶ್, ಲಕ್ಷ್ಮಣ ಪೂಜಾರಿ, ಮುದಲಾದಿ ಪದ್ಮ ಪೂಜಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading