Ad Widget

“ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯಯಿದೆ” : ಡಾ. ಶಿವಕುಮಾರ ಹೊಸೊಳಿಕೆ – ಕುಕ್ಕೆ ಸ್ಥಾನಘಟ್ಟದ ಬಳಿ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ನವಂಬರ್ 02 : “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗರಾಧನೆಯಲ್ಲಿ ಇಡೀ ಪ್ರಪಂಚದಲ್ಲಿ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಸಂತೃಪ್ತಿ ಹೊಂದುತ್ತಾರೆ.
ವಿವಿಧ ರೀತಿಯ ಅನಾರೋಗ್ಯ ಕಾಯಿಲೆಗಳು, ಸಂತಾನ ಭಾಗ್ಯ, ಮದುವೆ, ಕೃಷಿ, ವ್ಯಾಪಾರದಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾ ಬಂದವರು ಇಲ್ಲಿ ಹರಕೆ ಹೇಳಿ ಸೇವೆಯನ್ನು ತೀರಿಸಿ ಸಫಲತೆಯನ್ನ ಕಂಡಿದ್ದಾರೆ. ಇಂಥ ಕ್ಷೇತ್ರದಲ್ಲಿ ಎಲ್ಲಾ ಕಡೆ ಸ್ವಚ್ಛತೆ ಇರಬೇಕಾಗಿದ್ದು ಭಕ್ತಾದಿಗಳು ಎಲ್ಲೆಂದರಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಬಾಟಲ್ ಗಳು ಇತ್ಯಾದಿಗಳು ಕಂಡುಬರುತ್ತಿವೆ.
ಇಲ್ಲಿಯ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ 50-60 ಸ್ವಯಂಸೇವಕರು ಸುಬ್ರಹ್ಮಣ್ಯ ಕುಕ್ಕೆಶ್ರೀ ಸೀನಿಯರ್ ಚೇಂಬರ್ ನ ಸಹ ಯೋಗದೊಂದಿಗೆ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ. ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಕಂಡಿತ ಇದೆ” ಎಂದು ಡಾ. ಶಿವಕುಮಾರ್ ಹೊಸೊಳಿಕೆ ನುಡಿದರು.
ಈ ಸಂದರ್ಭದಲ್ಲಿ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ.ರವಿ ಕಕ್ಕೆಪದವು, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಗೋಪಾಲ ಎಣ್ಣೆಮಜಲು, ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ನಾಯಕರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading