Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಇಂದು ಭೇಟಿ ನೀಡಿದರು.
ಆದಿ ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಪೂಜೆಯಲ್ಲಿ ಪಾಲ್ಗೊಂಡು ಮಹಾಪೂಜೆ ಸೇವೆ ಸಲ್ಲಿಸಿದರು. 
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ,  ಬಿಜೆಪಿ ಸುಳ್ಯ ಮಂಡಲ  ಅಧ್ಯಕ್ಷರಾದ ವೆಂಕಟ್ ವಳಲಂಬೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಪ್ರಸನ್ನ ದರ್ಭೆ, ಗಿರೀಶ್ ಆಚಾರ್ಯ ಪೈಲಾಜೆ, ವನಜಾ ಭಟ್, ಶೋಭಾ ಗಿರಿಧರ್, ಭಾರತಿ ದಿನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading