Ad Widget

ಸುಳ್ಯ : ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಅ.30 ಗುರುವಾರದಂದು ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ವಹಿಸಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ನಂತರ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರೆಪ್ಪಾಡಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸಮುದಾಯದತ್ತ ಶಾಲಾ ಕಾರ್ಯಕ್ರಮದ ಆಶಯಗಳನ್ನು ಸಭೆಯ ಮುಂದಿಟ್ಟರು.
ಪೋಷಕರೆಲ್ಲರೂ ತಮ್ಮ ತಮ್ಮ ಮಕ್ಕಳ ಕೃತಿ ಸಂಪುಟ ವೀಕ್ಷಿಸಿ, ಕಲಿಕಾ ಪ್ರಗತಿಯನ್ನು ಅವಲೋಕಿಸಿದರು.
ಈ ಸಂದರ್ಭದಲ್ಲಿ ಕೆ.ವಿ.ಜಿ ಮಹಾವಿದ್ಯಾಲಯ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) ಸುಳ್ಯದ ವ್ಯವಸ್ಥಾಪಕರಾದ ಸುಜಿತ್, ಉಪನ್ಯಾಸಕರಾದ ಚಂದ್ರಶೇಖರ ಬಿಳಿನೆಲೆ, ವಿಶ್ರಾಂತ ಉಪನ್ಯಾಸಕರಾದ ಪಾಲಚಂದ್ರ ಇವರುಗಳ ನೇತೃತ್ವದಲ್ಲಿ ಘಟಕದ ವತಿಯಿಂದ ಶಾಲೆಗೆ ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಿ ಚಂದ್ರಶೇಖರ ಬಿಳಿನೆಲೆ ಹಾಗೂ ಸುಜಿತ್ ರವರು ಸಂದರ್ಭೋಚಿತವಾಗಿ ಮಾತನಾಡಿದರು.
ಬಳಿಕ ಪೋಷಕರು ತಮ್ಮ ಮಕ್ಕಳ ಕಲಿಕಾ ಸಾಧಕ ಬಾಧಕಗಳನ್ನು ಚರ್ಚಿಸಿದರು..
ಮಾರ್ಗದರ್ಶಕ ಶಿಕ್ಷಕಿ ಶ್ರೀಮತಿ ಯಶ್ವಿನಿ ಕೆ.ಪಿ.ಎಸ್ ಗಾಂಧಿನಗರ ಇವರು ಕಾರ್ಯಕ್ರಮಕ್ಕೆ ಮೆಚ್ಚುಗೆ  ವ್ಯಕ್ತಪಡಿಸಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ರವಿರಾಜ್ ಅಡ್ಕಾರು ಇವರು ಎನ್.ಎಸ್.ಎಸ್ ಸೇವಾ  ಸಂಗಮ ಟ್ರಸ್ಟ್ (ರಿ.) ಸುಳ್ಯ ಸಂಸ್ಥೆಗೆ ಕೃತಜ್ಞತೆ ಸಮರ್ಪಿಸಿ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಕರಾದ ಶ್ರೀಮತಿ ಹೇಮಲತಾ ಧನ್ಯವಾದ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿಯ ‌ಸದಸ್ಯರು, ಶಾಲಾ ಶಿಕ್ಷಕವೃಂದ, ಅಡುಗೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರಾದ ಶ್ರೀಮತಿ ಸುನಂದಾ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading