Ad Widget

ಮಂಡೆಕೋಲು : ಸ್ವಚ್ಚತೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮ

ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 2025 ರ ಸ್ವಚ್ಚತಾ ಅಭಿಯಾನದ ಅಂಗವಾಗಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಲ್ಲಡ್ಕ ಮಂಡೆಕೋಲು ಇದರ ಕಟ್ಟಡ ಸುತ್ತ ಶುಚಿತ್ವ, ಕಲ್ಲಡ್ಕ ಪೆರಾಜೆ ರಸ್ತೆ ಬದಿ ಕಾಡು ಕಡಿದು ಸ್ವಚ್ಚತೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿ ಕಾರ್ಯಕ್ರಮವು ನ 16 ರಂದು ನಡೆಯಿತು.

. . . . . . . . .

ಆರೋಗ್ಯ ಇಲಾಖೆ ಸಿಬ್ಬಂದಿ ಶ್ರೀಮತಿ ಮಧುಶ್ರೀ  ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಮಾಹಿತಿಯನ್ನು ನೀಡಿದರು. ಹಿರಿಯರಾದ ಅಪ್ಪಯ್ಯ ಮಣಿಯಾಣಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರತಿಮಾ ಹೆಬ್ಬಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪೆರಾಜೆ , ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷೆ ಶ್ರೀಮತಿ ವಿನುತ ಪಾತಿಕಲ್ಲು ಯವರು ಮೊದಲಾದವರು ಕಾರ್ಯಕ್ರಮಕ್ಕೆ ಶುಭಹಾರೈಸಿ ಮಾತನಾಡಿದರು. ಪದ್ಮಾವತಿ ಪೆರಾಜೆ ಸ್ವಾಗತಿಸಿ ವಸಂತಿ ಉಗ್ರಾಣಿಮನೆ ವಂದಿಸಿದರು. ಕಲ್ಲಡ್ಕ ಪೆರಾಜೆ ಭಾಗದ ಯುವಕರು , ಮಹಿಳೆಯರು , ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ದ ಸದಸ್ಯರು ಎಲ್ಲರೂ ಜೊತೆಯಾಗಿ ಸೇರಿಕೊಂಡು ಸ್ವಚ್ಚತೆ ಮಾಡಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading