Ad Widget

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಪ್ರಕಟಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪೊಲೀಸ್ ಇಲಾಖೆಯ ಸಹಕಾರ ಹಾಗೂ ಸಹ ಭಾಗಿತ್ವದೊಂದಿಗೆ,
ಯಾರೂ ಕೂಡ ತಮ್ಮ ಸಾಕು ಪ್ರಾಣಿಗಳಾದ ದನ, ಕರು, ಎತ್ತು, ಎಮ್ಮೆ, ಕೋಣ, ಬೆಕ್ಕು & ಬೆಕ್ಕು ಮರಿಗಳು ಮತ್ತು ನಾಯಿ & ನಾಯಿ ಮರಿಗಳು ಮುಂತಾದ ಜಾನುವಾರುಗಳನ್ನು  ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ರಥ ಬೀದಿಗಳಿಗೆ ಬಿಡದೆ ನಮ್ಮೂರಿನ ಪುಣ್ಯ ಪಾರಂಪರಿಕ ಧಾರ್ಮಿಕ ದೇವಸ್ಥಾನದ ಸುತ್ತಮುತ್ತಲಿನ ಪರಿಸರಗಳ ಶುಚಿತ್ವವನ್ನು ಕಾಪಾಡಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರದು ಆಗಿರುತ್ತದೆ. ಅಲ್ಲದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ ಮಳಿಗೆಗಳಲ್ಲಿ ಯಾರೂ ಕೂಡ ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟ್, ಗುಟ್ಕಾ ಮುಂತಾದ ಪದಾರ್ಥಗಳ ಮಾರಾಟ, ಸೇವನೆ, ಸೇದುವಿಕೆಯನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ ಪ್ಲಾಸ್ಟಿಕ್ ಬ್ಯಾಗುಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ರಸ್ತೆಗಳಲ್ಲಿ, ರಥ ಬೀದಿಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದು, ಸಿಕ್ಕ ಸಿಕ್ಕಲ್ಲಿ ತ್ಯಾಜ್ಯಗಳನ್ನು, ಕಸಗಳನ್ನು ಎಸೆಯುವುದು ದ್ರವ ತ್ಯಾಜ್ಯ ಗಲೀಜು ನೀರು ಬಿಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಂಡು  ದಂಡನೆಯನ್ನು ವಿಧಿಸಲಾಗುವುದು ಎಂದು  ಗ್ರಾಮ ಪಂಚಾಯತ್ ಪ್ರಕಟಣೆ ತಿಳಿಸಿರುತ್ತದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading