Ad Widget

ಸುಳ್ಯ : ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ – ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು  ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ  ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ  ನಡೆಯಿತು.

ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಕಾಂಗ್ರೆಸ್ ನ ಆಶಯ, ಕರ್ತವ್ಯ ಮತ್ತು ಸಂಘಟನೆಯ ಉದ್ದೇಶದ ಕುರಿತು ವಿವರ ನೀಡಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲ್ಯಾಣ್ ತೇಜಸ್ ಮಾತನಾಡಿ ರಾಜ್ಯದಲ್ಲಿ ಯುವ ಕಾಂಗ್ರೆಸ್ ಬಲಿಷ್ಠ ಗೊಳಿಸಲು ತಲ ಮಟ್ಟದಿಂದ ಸಂಘಟನೆ ಯಾಗಬೇಕಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಡಿಜಿಟಲ್ ಯೂತ್ ಮುಖಾಂತರ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯ ರಾಗ ಬೇಕೆಂದು ಅಭಿಪ್ರಾಯ ಪಟ್ಟರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಅನಿಲ್ ಚಿನ್ಮಯಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಯುವ ಕಾಂಗ್ರೆಸ್ ಸಂಘಟನೆ ಮತ್ತು ಬೆಳವಣಿಗೆಗೆ ರಾಜ್ಯ ಸಮಿತಿ ಕಟ್ಟಿಬದ್ದವಾಗಿದೆ. ನಾವು ಉಸ್ತುವಾರಿ ಕಾರ್ಯದರ್ಶಿ ಗಳಾಗಿ ಜಿಲ್ಲಾ ಪ್ರವಾಸ ಎಲ್ಲಾ ಕ್ಷೇತ್ರಗಳಲ್ಲಿ ಕೈಗೊಂಡಿದ್ದೇವೆ. ಪಕ್ಷದ ಭವಿಷ್ಯ ವಾಗಿರುವ ಯುವಕರನ್ನು ಹೆಚ್ಚಾಗಿ ಸೇರಿಸಿಕೊಳ್ಳಬೇಕು. ಯುವಕರಿಗೆ ಪಕ್ಷದಲ್ಲಿ ಅವಕಾಶ ಗಳು ಹೆಚ್ಚು ಇದೆ. ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್ ಐ ವೈ ಸಿ ಆಪ್ ಬಗ್ಗೆ ವಿವರ ನೀಡಿದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ಪ್ರಸಾದ್ ಪಾಣಾಜೆ ಮಾತನಾಡಿ ಯುವ ಕಾಂಗ್ರೆಸ್ ಸಂಘಟನೆಗೆ ಬ್ಲಾಕ್ ಕಾಂಗ್ರೆಸ್ ಮತ್ತು ಹಿರಿಯ ಮುಖಂಡರುಗಳು ಸಹಕಾರ ನೀಡಿದರೆ ಸಂಘಟನೆ ಸದೃಢ ಗೊಳ್ಳುತ್ತದೆ ಎಂದು ಹೇಳಿದರು.

ಸುಳ್ಯ ವಿಧಾನ ಸಭಾ ಕ್ಷೇತ್ರದ 2023ರ ಅಭ್ಯರ್ಥಿ ಕೃಷ್ಣಪ್ಪ ಜಿಗಣಿ ಶುಭಹಾರೈಸಿದರು.

ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರ ನೇತೃತ್ವದಲ್ಲಿ ಅತ್ಯಂತ ಚುರುಕು ಮತ್ತು ಸಂಘಟನಾತ್ಮಕ ವಾಗಿ ಕಾರ್ಯನಿರ್ವಹಿಸುತ್ತಿದೆ. ಯುವ ಕಾಂಗ್ರೆಸ್ ಬೆನ್ನ ಹಿಂದೆ ನಾನು ಯಾವತ್ತೂ ನಿಲ್ಲುತ್ತೆವೆ. ಸುಳ್ಯದಲ್ಲಿ ಪಕ್ಷ ಬೆಳವಣಿಗೆ ಮತ್ತು ಚುನಾವಣೆ ಎದುರಿಸಲು ಅಸಾಧ್ಯವೇನೂ ಇಲ್ಲ ಯುವ ಕಾಂಗ್ರೆಸ್ ಬಲಿಷ್ಠ ಗೊಳಿಸಲು ಹಿರಿಯ ಮುಖಂಡರು ಕೈಜೋಡಿಸಬೇಕು ಎಂದು ಹೇಳಿದರು.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಶುಭ ಹಾರೈಸಿದರು.

ಗೌರವಾರ್ಪಣೆ : ಕಾರ್ಯಕ್ರಮದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್ ಮತ್ತು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ರವರನ್ನು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿ  ಟಿ ಎಂ ಶಹೀದ್ ತೆಕ್ಕಿಲ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್ ಕೃತಜ್ಞತೆ ಸಲ್ಲಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಬಶೀರ್, ಸುಳ್ಯ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ವಿಧಾನ ಸಭಾ ಕ್ಷೇತ್ರ ಯುವಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಾಕೀರ್ ಪೀಲ್ಯ ವಂದಿಸಿದರು. ದ. ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಸತ್ಯಕುಮಾರ್ ಆಡಿಂಜಾ, ನಂದರಾಜ್ ಸಂಕೇಶ್, ಶಾಫಿ ಕುತ್ತಮೊಟ್ಟೆ, ಶಿವಕುಮಾರ್ ಕಂದಡ್ಕ, ರವಿಕುಮಾರ್ ಕಿರೀಭಾಗ, ಪ್ರೇಮ ಹರೀಶ್ವರನ್ ಗಾಂಧಿ, ರಕ್ಷಿತ್ ದೊಡ್ಡಡ್ಕ, ಜಯಪ್ರಕಾಶ್ ನೆಕ್ರಪ್ಪಾಡಿ, ಮಹೇಶ್ ಬೆಳ್ಳಾರ್ಕರ್, ಮಂಜುನಾಥ್ ಮಡ್ತಿಲ, ಸೇರಿದಂತೆ  ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕಾಂಗ್ರೇಸ್ ವ್ಯಾಪ್ತಿಯ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading