Ad Widget

ಕಲ್ಮಕಾರು ಭಾಗಕ್ಕೆ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡ ಬಸ್ ಸಂಚಾರ ಮತ್ತೆ ಪ್ರಾರಂಭ ; ಗ್ರಾಮಸ್ಥರ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಹಾಗೂ ಅಹವಾಲು ಸ್ವೀಕರಿಸುವ ಸಲುವಾಗಿ ನ.20 ರಂದು ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ “ಸುಳ್ಯ-ಗುತ್ತಿಗಾರು-ಕಲ್ಮಕಾರು ಭಾಗಕ್ಕೆ 11:30 ಗಂಟೆಗೆ ಬರುತ್ತಿದ್ದ ಬಸ್ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ಈ ಬಸ್ ಸಂಚಾರವನ್ನು ಮತ್ತೆ ಪ್ರಾರಂಭಿಸಬೇಕು” ಎಂದು ಗ್ರಾಮಸ್ಥರು ಶಾಸಕರಿಗೆ ಅಹವಾಲು ನೀಡಿದ್ದರು. ಸಾರ್ವಜನಿಕರ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಇಂದು(ನ.21) ಮತ್ತೆ ಸುಳ್ಯದಿಂದ ಬಸ್ ಸಂಚಾರ ಪ್ರಾರಂಭಗೊಳ್ಳುವಂತೆ ಮಾಡಿದ್ದು, ಇಂದಿನಿಂದ ಬಸ್ ಸಂಚಾರ ಮತ್ತೆ ಪ್ರಾರಂಭಗೊಂಡಿದೆ ಎಂದು ತಿಳಿದುಬಂದಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading