Ad Widget

ನಡುಗಲ್ಲು : ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ಹಾಗೂ ನೂತನ ವಿದ್ಯುತ್ ಪರಿವರ್ತಕದ ಉದ್ಘಾಟನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟ್ ದಂಬೆಕೋಡಿ ಇವರು ನ.22 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಕಾಯರ್ ಮುಗೇರ್ ಎಂಬಲ್ಲಿ ಅಂಗನವಾಡಿ ಸಮೀಪ ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ಹಾಗೂ ಚಾರ್ಮತ ಕುತ್ಯಾಳ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ವಿದ್ಯುತ್ ಪರಿವರ್ತಕದ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಭಾರತೀಯ ಜನತಾ ಪಾರ್ಟಿ ಗ್ರಾಮ ಸಮಿತಿಯ ಅಧ್ಯಕ್ಷರು, ಸಿ.ಎ ಬ್ಯಾಂಕ್ ನ ನಿರ್ದೇಶಕರು, ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಊರಿನ ಹಿರಿಯರು, ಸ್ಥಳೀಯರು ಹಾಗೂ ಮೆಸ್ಕಾಂ ಜೆ.ಇ ಲೋಕೇಶ್ ಎಣ್ಣೆಮಜಲು ಹಾಗೂ ಸಿಬ್ಬಂದಿ ವೆಂಕಟ್ರಮಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading