Ad Widget

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ : ಗುತ್ತಿಗಾರು ವಲಯ ಮಟ್ಟದ ಪ್ರತಿಭಾ ಕಾರಂಜಿ

ಗುತ್ತಿಗಾರು ವಲಯ ಮಟ್ಟದ ಪ್ರತಿಭಾ ಕಾರಂಜಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನ.25ರಂದು ನಡೆಯಿತು.
ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ನಡೆಯಬೇಕು. ಅವರ ಮುಂದಿನ ಸಾಧನೆಗೆ ಪ್ರೇರಕವಾಗಬೇಕು ಎಂದು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಅವರು ನುಡಿದರು.
ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವಿಶ್ವನಾಥ ಮೂಕಮಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ ಮಾಡಬಾಕಿಲು ಶುಭ ಹಾರೈಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಂದರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಡಳಿತ ಮಂಡಳಿ ಉಪಾಧ್ಯಕ್ಷರಾದ ಅಣ್ಣಾಜಿ ಗೌಡ, ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಸತ್ಯಪ್ರಸಾದ ಪಿ., ಗುತ್ತಿಗಾರು ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ, ದೇವಚಳ್ಳ ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಭಾಕರ, ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಮುಖ್ಯೋಪಾಧ್ಯಾಯಿನಿ ಭವ್ಯಾ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿಯವರು ಸ್ವಾಗತಿಸಿ, ಸಹಶಿಕ್ಷಕಿ ಜಯಶ್ರೀಯವರು ವಂದಿಸಿದರು. ಸಹಶಿಕ್ಷಕ ಹರಿಪ್ರಸಾದ ಅವರು ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾ ಕಾರಂಜಿಯಲ್ಲಿ ಭಗವಾನ್ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಪ್ರೌಢಶಾಲೆ ಸಮಗ್ರ ಪ್ರಥಮ ಸ್ಥಾನವನ್ನು, ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಮತ್ತು ಸರಕಾರಿ ಪ್ರೌಢಶಾಲೆ ಎಲಿಮಲೆ ಸಮಗ್ರ ದ್ವಿತೀಯ ಸ್ಥಾನವನ್ನು, ಜ್ಞಾನದೀಪ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಲಿಮಲೆ ಸಮಗ್ರ ತೃತೀಯ ಸ್ಥಾನವನ್ನು ಪಡೆದುಕೊಂಡಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading