Ad Widget

ಅಕ್ಕೋಜಿಪಾಲ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಾಗೃತಿ  ಕರಪತ್ರ ವಿತರಣೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ನ.30 ರಂದು ಅಕ್ಕೋಜಿಪಾಲ್ ಕಾಲೊನಿ ಪ್ರದೇಶದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ ಪ್ರೇರಣೆ ನೀಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರತ್ಯಡ್ಕ, ಪದಾಧಿಕಾರಿಗಳು ಹಾಗೂ ಸದಸ್ಯೆಯರು ಸಕ್ರಿಯವಾಗಿ ಪಾಲ್ಗೊಂಡು ಕರಪತ್ರಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಜನರಲ್ಲಿ ಸ್ವಚ್ಛತೆಯ ಮಹತ್ವವನ್ನು ಪರಿಣಾಮಕಾರಿಯಾಗಿ ತಲುಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading