Ad Widget

ಅರಂತೋಡು : ಕೆ.ಆರ್ ಗಂಗಾಧರ್ ಮತ್ತು ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿಸೆಂಬರ್ 6 ಶನಿವಾರ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಲಿದೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ.ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ದಿವಾಕರ್ ರೈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಸರ್ಕಾರಿ ಪದವಿ ಕಾಲೇಜು ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಅತಿಥಿಗಳಾಗಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಸಂಸ್ಥೆಯ ಸಂಚಾಲಕ ಎ.ಸಿ.ವಸಂತ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ
ಕೆ.ಆರ್.ಗಂಗಾಧರ್ ವಿಶ್ರಾಂತ ಪ್ರಾಂಶುಪಾಲರಿಗೆ ಮತ್ತು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ
ಶಿಕ್ಷಣ ಸಂಸ್ಥೆಗಳನ್ನು ಪ್ರತಿನಿಧಿಸಿದ ಹೆಮ್ಮೆಯ ವಿದ್ಯಾರ್ಥಿಗಳಾದ ಕೃತಿ ಕೆ.ಎಸ್, ಸುಮ ಕೆ.ಆರ್, ದೀಪ್ತಿ ಕೆ.ಸಿ, ಚಂದನಾ, ಜಸ್ಮಿತಾ, ಚಿಂತನಾ, ಶ್ರವಣ್, ಚರಿಷ್ಮಾ ಅವರಿಗೆ ಅಭಿನಂದನಾ ಸನ್ಮಾನ ನಡೆಯಲಿದೆ. ಸಮಾರಂಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರಿಗೆ ದತ್ತಿನಿಧಿಗಳ ಪ್ರಶಸ್ತಿ ಪುರಸ್ಕಾರಗಳು, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಲೋಕೇಶ್ ಊರುಬೈಲ್ ನಿರ್ದೇಶನದ ಅರೆ ಭಾಷೆ ನಾಟಕ “ಅಪ್ಪ” ಪ್ರದರ್ಶನ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading