Ad Widget

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10 ಬುಧವಾರದಂದು “ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ” ಕಾರ್ಯಕ್ರಮ ನಡೆಯಲಿದ್ದು, ಪೂರ್ವಾಹ್ನ 8:30ಕ್ಕೆ ಧ್ವಜಾರೋಹಣ ಹಾಗೂ ಪೂರ್ವಾಹ್ನ 9:00 ಗಂಟೆಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷರಾದ ಶ್ರೀಮತಿ ಭಾರತಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ವೆಂಕಟ್ ವಳಲಂಬೆ, ಮಾಯಿಲಪ್ಪ ಗೌಡ ಕೊಂಬೆಟ್ಟು, ಶ್ರೀಮತಿ ರೇವತಿ ಆಚಳ್ಳಿ, ಶ್ರೀಮತಿ ಮಂಜುಳಾ ಮುತ್ಲಾಜೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ, ಗುತ್ತಿಗಾರು ವಲಯ ಸಿ.ಆರ್.ಪಿ ಕುಶಾಲಪ್ಪ ತುಂಬತ್ತಾಜೆ ಉಪಸ್ಥಿತರಿರಲಿದ್ದು, ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ವೆಂಕಪ್ಪ ಕೇನಾಜೆ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ.
ಅಪರಾಹ್ನ 1:00 ಗಂಟೆಯಿಂದ “ಪ್ರತಿಭಾ ಪ್ರದರ್ಶನ” ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading