Ad Widget

ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರು ಡಿ.05ರಂದು ಸಂಜೆ ಬಡ್ಡಡ್ಕದ ಲ್ಲಿರುವ ಅವರ ಮನೆಗೆ ತೆರಳಿ ತಾಯಿ ಶ್ರೀಮತಿ.ಕೆ ಸಾವಿತ್ರಿಯವರ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಹಾರೈಸಿದರು.

“ಡಿ.30ರಂದು ಕುಕ್ಕುಜಡ್ಕದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕಾದಂಬರಿಕಾರ ತೇಜಕುಮಾರ್ ಬಡ್ಡಡ್ಕ ರವರು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಅರ್ಹ ವ್ಯಕ್ತಿಯನ್ನು ಗುರುತಿಸಿರುವುದು ಸಾಹಿತ್ಯ ಲೋಕಕ್ಕೆ ಸಂದ ಗೌರವ” ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್ ದಾಸ್, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ, ದ.ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ, ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಬಡ್ಡಡ್ಕ, ಪುರುಷೋತ್ತಮ ದೋಣಿಮೂಲೆ ಶುಭಹಾರೈಸಿದರು.
ತೇಜಕುಮಾರ್ ಬಡ್ಡಡ್ಕರವರ ಪತ್ನಿ ಶ್ರೀಮತಿ ಜಯಲಲಿತ, ಪುತ್ರಿ  ಹಾಗೂ ಮನೆಯವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading