Ad Widget

ಕುಕ್ಕುಜಡ್ಕ : ಡಿ.30ರಂದು ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ ಇದರ ಆಶ್ರಯದಲ್ಲಿ ಡಿ.30ರಂದು ಡಾ. ಪೈಲೂರು ಗೋಪಾಲಕೃಷ್ಣ ವೇದಿಕೆ, ಅಬಸಮ ಸಭಾಂಗಣ, ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ.11ರಂದು ಕುಕ್ಕುಜಡ್ಕ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಯಿತು.
ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಕೋಶಾಧಿಕಾರಿ ದಯಾನಂದ ಆಳ್ವ, ಸಮ್ಮೇಳನದ ಕಾರ್ಯಾಧ್ಯಕ್ಷರಾದ ಕೃಷ್ಣಪ್ರಸಾದ್ ಮಾಡಬಾಕಿಲು, ಕೋಶಾಧಿಕಾರಿ ಅರುಣ್ ಕುಮಾರ್ ಮುಂಡಾಜೆ, ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ, ನಿವೃತ್ತ ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ಚೂಂತಾರು, ‌ಹಿರಿಯ ಸಾಹಿತಿಗಳಾದ ಎಂ.ಟಿ ಶಾಂತಮೂಲೆ, ಸಂಜೀವ ಕುದ್ಪಾಜೆ, ಕೇಶವ.ಸಿ.ಎ, ಹರ್ಷವರ್ಧನ್ ಬೊಳ್ಳೂರು, ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ತಿರುಮಲೇಶ್ವರ ದಂಬೆತೋಟ, ವಿಶ್ವನಾಥ ಮೂಕಮಲೆ, ಯಾದವೇಂದ್ರ ಕಡಪಳ, ಶಿಕ್ಷಕರಾದ ಹರಿಪ್ರಸಾದ್, ಶೋಭಾ.ಹೆಚ್, ಭವ್ಯ.ಕೆ, ಸಂಧ್ಯಾ ಕುಮಾರಿ, ಮಿಥುನ್.ಕೆ, ಜಯಶ್ರೀ, ಚೈತನ್ಯ ಬೊಳ್ಳೂರು ಹಾಗೂ ಧನ್ಯ ರಾಜ್ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading