ಜಯನಗರ ಗಜಾನನ ಭಜನಾ ಮಂದಿರದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ಮೊತ್ತದ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ಮೊತ್ತದ ಚೆಕ್ ವಿತರಣೆಯನ್ನು ಡಿ.12 ರಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿ ಕ್ಷೇತ್ರದ ಇತಿಹಾಸದ ಬಗ್ಗೆ ಕ್ಷೇತ್ರದ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಸ್ತೂರಿ ಶಂಕರ್, ಭಜನಾ ಮಂದಿರದ ಪ್ರಮುಖರಾದ ಮಾಧವ, ಕುಸುಮಾಧರ, ಒಕ್ಕೂಟದ ಅಧ್ಯಕ್ಷರಾದ ನಾಗವೇಣಿ ಹಾಗೂ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್ ಹಾಗೂ ಊರಿನ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸೇವಾ ಪ್ರತಿನಿಧಿ ಸುರೇಶ್ ಪರಿವಾರಕಾನ ನಿರೂಪಿಸಿ, ಭಜನಾ ಮಂದಿರದ ಕೋಶಾಧಿಕಾರಿ ಸ್ವಾಗತಿಸಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಲಾವಣ್ಯರವರು ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading