Ad Widget

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪ್ರತಿಭೋತ್ಸವ ; “ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆಯೇ ಪ್ರತಿಭೋತ್ಸವ” : ಸದಾನಂದ ಮಾವಜಿ

“ಪಠ್ಯ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೊರಸೋಸುವುದಕ್ಕೆ ಪ್ರತಿಭೋತ್ಸವ ಸೂಕ್ತ ವೇದಿಕೆಯಾಗಿದೆ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.
ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಎಸ್. ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು.
ಶಿಕ್ಷಕರಾದ ಮೀನಾ ಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ,  ಶಿವಪ್ರಕಾಶ್.ಕೆ, ಕುಮಾರ್ ಲಮಾಣಿ, ಸವಿತಾ ಕುಮಾರಿ, ಪ್ರಶಿಕ್ಷಣಾರ್ಥಿಗಳಾದ ನಿಶ್ಮಿತಾ.ಕೆ, ಯಜ್ಞ.ಎಂ, ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು.

ಇದೇ ವೇಳೆ ನಾನಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading