Ad Widget

ಡಿ.30: ಚೊಕ್ಕಾಡಿಯಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ

. . . . . . . . .

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಸಮ್ಮೇಳನದ ಸ್ವಾಗತ ಸಮಿತಿ ಕುಕ್ಕುಜಡ್ಕ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಚೊಕ್ಕಾಡಿಯ ಡಾ. ಪೈಲೂರು ಗೋಪಾಲಕೃಷ್ಣ ವೇದಿಕೆಯ ಅಬಸಮ ಸಭಾಂಗಣದಲ್ಲಿ ಡಿ.30ರಂದು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

. . . . . . .

ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದ ರೂಪುರೇಷೆಯ ಕುರಿತು ವಿವರಿಸಿದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹಾಗೂ ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಕಾರ್ಯಕ್ರಮದ ಕುರಿತಂತೆ ಮಾತನಾಡಿ, ಡಿ.30ರಂದು ಬೆಳಿಗ್ಗೆ ಕುಕ್ಕುಜಡ್ಕ ಪೇಟೆಯಲ್ಲಿ ಮಾಜಿ ಸಚಿವ ಎಸ್. ಅಂಗಾರ ಅವರು ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಅಮರಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ. ಅವರು ಪರಿಷತ್ತಿನ ಧ್ವಜಾರೋಹಣ ಹಾಗೂ ಕ.ಸಾ.ಪ. ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಬಳಿಕ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಸಾಹಿತಿ ತೇಜಕುಮಾರ್ ಬಡ್ಡಡ್ಕ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಸುರೇಶ್ ಕಂಜರ್ಪಣೆ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ಹೊಸ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕಳೆದ ಬಾರಿ ಅರಂತೋಡಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ ಅವರು ನಿಕಟಪೂರ್ವಾಧ್ಯಕ್ಷರ ನೆಲೆಯಲ್ಲಿ ಮಾತನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಅಂಗಾರ, ಕ.ಸಾ.ಪ. ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ ಮಾಡಬಾಕಿಲು ಉಪಸ್ಥಿತರಿರಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಅವರು ಸಮ್ಮೇಳನದ ಆಶಯ ನುಡಿ ಹೇಳಲಿದ್ದಾರೆ. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು ಪ್ರಸ್ತಾವನೆಗೈಯಲಿದ್ದಾರೆ. ಚೊಕ್ಕಾಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತಗೀತೆ ಹಾಡಲಿದ್ದಾರೆ. ಸಾಹಿತಿ ಎ.ಕೆ. ಹಿಮಕರ ಅವರು ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಲಿದ್ದು, ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಅವರು ಸ್ಮರಣ ಸಂಚಿಕೆಯ ಸಂಪಾದಕದ ಕುರಿತು ಮಾತನಾಡಲಿದ್ದಾರೆ ಎಂದು ಅವರು ಹೇಳಿದರು.

ಮಧ್ಯಾಹ್ನ ಕವಿಗೋಷ್ಠಿ, ಬಳಿಕ ಚೊಕ್ಕಾಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬಳಿಕ ವಿಚಾರಗೋಷ್ಠಿ, ಕಾವ್ಯ ಕುಂಚ ಗಾಯನ ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು,ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಕನ್ನಡ ಕಸ್ತೂರಿ ಸನ್ಮಾನ ನಡೆಯಲಿದೆ. ಕೊನೆಯಲ್ಲಿ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಾಲು ಮರಗಳ ತಾಯಿ ತಿಮ್ಮಕ್ಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಮಾಡಬಾಕಿಲು, ಪ್ರ.ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಶ್ರೀಮತಿ ಚಂದ್ರಮತಿ ಕೆ. ಶ್ರೀಮತಿ ಶಶ್ಮಿಭಟ್ ಅಜ್ಜಾವರ, ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading