Ad Widget

ಹರಿಹರ ಪಳ್ಳತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ “ಕಲಿಕಾ ಹಬ್ಬ 2025-26” ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ನಿಪುಣ್ ಭಾರತ್ ಮಿಷನ್ ಪ್ರಾಯೋಜಿತ ಕಾರ್ಯಕ್ರಮ “ಕಲಿಕಾ ಹಬ್ಬ 2025-26” ಕಾರ್ಯಕ್ರಮವು ಡಿ.19ರಂದು ಹರಿಹರ ಪಳ್ಳತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳಿಗೆ ಕೈ-ಬರಹ ಮತ್ತು ಕ್ಯಾಲಿಗ್ರಫಿ, ಗಟ್ಟಿಯಾಗಿ ಓದುವುದು, ಕಥೆ ಹೇಳುವುದು, ಆರೋಗ್ಯ ಮತ್ತು ಪೌಷ್ಠಿಕಾಂಶ, ಹಂಟ್ ಮತ್ತು ಮೆಮೋರಿ ಪರೀಕ್ಷೆ ಹಾಗೂ ಸಂತೋಷದಾಯಕ ಗಣಿತ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕುಶಾಲಪ್ಪ ಪಾರೆಪ್ಪಾಡಿ, ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ದೇವಕಿ ನೆತ್ತಾರ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ರಮ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ವ್ಯಾಪ್ತಿಯ 9 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರುಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಾರ್ವಜನಿಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading