Ad Widget

ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ – ಸಾರ್ವಜನಿಕರಿಗೆ ಮ್ಯಾಪಿಂಗ್ ಮಾಡಿಸಿಕೊಳ್ಳಲು ಸೂಚನೆ ; ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು ಹಾಗೂ ಹೊಸದಾಗಿ ಸೇರ್ಪಡೆಗೊಂಡವರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ಮುಖಾಂತರ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಮ್ಯಾಪಿಂಗ್ ಮಾಡಿಸಿಕೊಳ್ಳಲು ತಾವು ಈ ಹಿಂದೆ ವಾಸ್ತವ್ಯವಿದ್ದ ತಮ್ಮ ಹಿಂದಿನ ವಿಧಾನಸಭಾ ಕ್ಷೇತ್ರದ ನಂಬರ್, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು, ಒಂದು ವೇಳೆ ತಮ್ಮ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ತಮ್ಮ ತಂದೆ-ತಾಯಿಯ ಅವರ ಕ್ರಮಸಂಖ್ಯೆ ಅಥವಾ ಅಜ್ಜ-ಅಜ್ಜಿಯ ಅವರ ಕ್ರಮ ಸಂಖ್ಯೆಯೊಂದಿಗೆ ಮಾಹಿತಿಯನ್ನು ಸಂಬಂಧಪಟ್ಟ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ರವರಲ್ಲಿ ನೀಡಿ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಮ್ಮ ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿಗಳ ಕಛೇರಿಯನ್ನು ಅಥವಾ ಬಿ.ಎಲ್.ಓ ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading