Ad Widget

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಸಮಾರೋಪ ಸಮಾರಂಭವು ಡಿ.19 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಂಗಳೂರಿನ ದೇವನಹಳ್ಳಿ ಚಾಣಕ್ಯ ಮಹಾವಿದ್ಯಾಲಯದ language centre project assistant ಆದ ಡಾ.ಶಶಾಂಕ ಹತ್ವಾರ್ ರವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ಸಂಸ್ಕೃತದ ಮಹತ್ವ ಹಾಗೂ ಸಂಸ್ಕೃತ ಭಾಷೆಯನ್ನು ಕಲಿಯುವ ಹಾಗೂ ಕಲಿತು ಉಳಿಸುವ ಅನಿವಾರ್ಯತೆಯನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್  ಡಿ.ವಿಯವರು 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರ ನಡೆಸಿಕೊಟ್ಟ ಶ್ರೀಮತಿ ಸಂಧ್ಯಾ ಕುಮಾರಿ ಕುಂಟಾರು, ಪ್ರಶಿಕ್ಷಕಿ ಸಂಸ್ಕೃತ ಭಾರತೀ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗ ಹಾಗೂ  ಅತಿಥಿಗಳಾಗಿ ಆಗಮಿಸಿದ ಡಾ. ಶಶಾಂಕ ಹತ್ವಾರ್ ಅವರಿಗೆ ಸನ್ಮಾನಿಸಿ ಗೌರವಿಸಿದರು.

ವೇದಿಕೆಯಲ್ಲಿ ಕಾಲೇಜಿನ ಅಕಾಡೆಮಿಕ್ ಕೊ-ಆರ್ಡಿನೇಟರ್ ಡಾ. ಕವಿತಾ ಬಿ.ಎಂ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರಧ್ವಾಜ್.ಬಿ, ಸಂಹಿತ ಸಿದ್ಧಾಂತ ವಿಭಾಗದ ಮುಖ್ಯಸ್ಥೆ ಡಾ ಶ್ರೀಜಾ.ಎಸ್ ಹಾಗೂ ಸಂಸ್ಕೃತ ಪ್ರಾಧ್ಯಾಪಕಿಯಾದ ಶ್ರೀಮತಿ ಶಶಿಕಲಾ ದೇರ್ಲ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸಮರ್ಥ್ ಅರಳಿ ಹಾಗೂ ಕು.ಯಜ್ಞ ನಿರೂಪಿಸಿ, ಕು.ಅಂಕಿತಾ ಸ್ವಾಗತಿಸಿ, ಕು.ಸನ್ನಿಧಿ ಎನ್ ಮತ್ತು ಬಳಗ ಪ್ರಾರ್ಥಿಸಿ, ಕು. ಕೃತಿಕಾ.ಡಿ ವಂದಿಸಿದರು.

ಕಾರ್ಯಕ್ರಮದ ಅಂಗವಾಗಿ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading