Ad Widget

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ “ಕುಸುಮ-ಸ್ನೇಹ-ಸಂಗಮ” ಕಾರ್ಯಕ್ರಮ ; “ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಅನನ್ಯ” : ಪ್ರೋ. ದಿನೇಶ್ ಕಾಮತ್

ಸುಬ್ರಹ್ಮಣ್ಯ : “ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಅನನ್ಯ. ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಭವಿಷ್ಯ ರೂಪಿಸಿಕೊಂಡ ವಿದ್ಯಾರ್ಥಿಗಳು ಸಂಸ್ಥೆಯ ಆಸ್ಥಿಯಾಗುತ್ತಾರೆ. 1983ರಿಂದ 2024ರ ತನಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯು ಅಸಂಖ್ಯಾತ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆ ಕಾಲದಿಂದಲೂ ಆಧಾರಸ್ತಂಭವಾಗಿದೆ” ಎಂದು ಕೆ.ಎಸ್.ಎಸ್.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದಿನೇಶ್ ಕಾಮತ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆದಿತ್ಯವಾರ ನಡೆದ ಹಿರಿಯ ವಿದ್ಯಾರ್ಥಿಗಳ “ಕುಸುಮ ಸ್ನೇಹ ಸಂಗಮ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ತಾವು ಕಲಿತ ವಿದ್ಯಾಸಂಸ್ಥೆಯು ನಮಗೆ ಮಾತೃ ಸಮಾನವಾಗಿದೆ. ಆದುದರಿಂದ ಪ್ರತಿಯೊಬ್ಬ ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಬಗ್ಗೆ ಅಪರಿಮಿತ ಪ್ರೇಮವನ್ನು ಹೊಂದಿರಬೇಕು” ಎಂದರು.

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್.ಎನ್, ಕಾರ್ಯದರ್ಶಿ ತೇಜಸ್ ಕಳಿಗೆ, ಕಾರ್ಯಕ್ರಮ ಸಂಯೋಜಕರಾದ ವಿಮಲಾ ರಂಗಯ್ಯ, ಲೋಕೇಶ್ ಬಿ.ಎನ್, ಶ್ರೀಲತಾ ಕಮಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವಾರ್ಪಣೆ : ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪ್ರೊ.ದಿನೇಶ್ ಕಾಮತ್, ಪ್ರೊ.ಕೆ.ರಂಗಯ್ಯ ಶೆಟ್ಟಿಗಾರ್, ಪ್ರೊ.ಬಾಲಕೃಷ್ಣ.ಪೈ, ಪ್ರೊ.ಉದಯ ಕುಮಾರ್, ನಿವೃತ್ತ ಉಪನ್ಯಾಸಕರಾದ ಡಾ.ತಿಲಕ್ ಎ.ಎ, ಜಯರಾಮ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಮ ಯೇನೆಕಲ್ಲು, ನಿವೃತ್ತ ಗ್ರಂಥಪಾಲಕಿ ಸುನಿತಾ ಮೂಲೆಮಜಲು, ನಿವೃತ್ತ ಸಿಬ್ಬಂದಿಗಳಾದ ಸುಬ್ರಹ್ಮಣ್ಯ, ಚಂದ್ರಾವತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಈ ಹಿಂದೆ ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಹಾಗೂ ಸಿಬ್ಬಂದಿಗಳನ್ನು ಗುರುತಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಉಪನಯಾಸಕರೊಂದಿಗೆ ಸಂವಾದ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading