Ad Widget

ಉಡುಪಿಯ ಉದ್ಯಾವರದಲ್ಲಿ ಬೈಕ್ ಅಪಘಾತ – ಕುಲ್ಕುಂದದ ಯುವಕ ಮೃತ್ಯು

ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜ.02 ರಂದು ರಾತ್ರಿ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ  ಬೀಡಿನಗದ್ದೆ ನಿವಾಸಿ ಯುವರಾಜ್(27) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  ಅವರು ಉಡುಪಿಯಲ್ಲಿ ಹ್ಯಾಂಗ್ಯೋ ಐಸ್ ಕ್ರೀಂ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು.

ಮೃತರು ತಂದೆ ಜನಾರ್ಧನ ಬೀಡಿನಗದ್ದೆ, ತಾಯಿ ವಾರಿಜಾ, ಸಹೋದರ ದೀಪಕ್ ರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading