Ad Widget

ವಳಲಂಬೆ : ಸಾಮೂಹಿಕ ಶ್ರೀ ಧನ್ವಂತರಿ ಪೂಜೆ ಹಾಗೂ ಧಾರ್ಮಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್ ಗುತ್ತಿಗಾರು ವಲಯ, ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುತ್ತಿಗಾರು ವಲಯ.ಇವರ ಸಹಭಾಗಿತ್ವದಲ್ಲಿ ಸಾಮೂಹಿಕ ಶ್ರೀ ಧನ್ವಂತರಿ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.3 ರಂದು ನಡೆಯಿತು.

. . . . . . . . .

. . . . . . .

ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಖಂಡ ರಾಜೇಶ್ ಮೇನಾಲರವರು ದೀಪ ಬೆಳಗಿಸಿ ಉದ್ಘಾಟಿಸಿ, ಧಾರ್ಮಿಕ ಉಪನ್ಯಾಸ ನೀಡಿದರು. ಧನ್ವಂತರಿ ಪೂಜೆಯ ಮಹತ್ವ ಮತ್ತು ಹಿಂದೂ ಸಂಸ್ಕೃತಿ, ಸಂಸ್ಕಾರದ, ಆಚರಣೆ, ವಿಚಾರ, ಕಾರ್ಯಕ್ರಮದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಜನಜಾಗೃತಿ ನಿಕಟಪೂರ್ವ ಅಧ್ಯಕ್ಷ ಪಿ.ಸಿ ಜಯರಾಮ ಗೌಡ ಮಡಪ್ಪಾಡಿ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಲವು ಸಮಾಜಮುಖಿ ಕಾರ್ಯಕ್ರಮಗಳು ಇನ್ನು ಹೆಚ್ಚಿನ ಜನತೆಗೆ ತಲುಪಲಿ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಮಾತನಾಡಿ ಧನ್ವಂತರಿ ಪೂಜೆ ಇದು ವಿಶೇಷ ಪೂಜೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಸಿರುವ ಎಲ್ಲರಿಗೂ ಆರೋಗ್ಯ,ಹಾಗೂ ನೆಮ್ಮದಿ ಸಿಗಲಿ ಎಂದು ಶುಭ ಹಾರೈಸಿದರು.
2024 ರಿಂದ 2025 ವರೆಗೆ ಒಕ್ಕೂಟದ ಪದಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದವರನ್ನು ವಿಶೇಷವಾಗಿ ಗೌರವಿಸಲಾಯಿತು. ಹಾಗೂ ಒಕ್ಕೂಟದ ಪದಾಧಿಕಾರಿಗಳಿಗೆ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ವೆಂಕಟ್ ದಂಬೆಕೋಡಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ತಾಲೂಕು ಸ್ವಸಹಾಯ ಸಂಘಗಳ ಒಕ್ಕೂಟಗಳ ಕೇಂದ್ರ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ. ಸಮಿತಿಯ ಗೌರವಾಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷ ಯೋಗೀಶ್ ದೇವ ವಹಿಸಿದ್ದರು.

ವೇದಿಕೆಯಲ್ಲಿ ಮಂಜುನಾಥೇಶ್ವರ ಭಜನಾ ಪರಿಷತ್ ತಾಲೂಕು ನಿರ್ದೇಶಕಿ ಶ್ರೀಮತಿ ರವಿಕಲಾ ಚೆಮ್ನೂರು, ಗುತ್ತಿಗಾರು ಭಜನಾ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ಪೈಕ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಕ್ಯಾಪ್ಟನ್ ಸತೀಶ್ ಬಂಬುಳಿ, ಪೂಜಾ ಸಮಿತಿ ಗೌರವ ಸಲಹೆಗಾರ ಬಾಬು ಮಾಸ್ತರ್ ಆಚ್ರಪ್ಪಾಡಿ, ಮುಳಿಯ ಕೇಶವ ಭಟ್, ಬಿ.ಕೆ.ಬೆಳ್ಯಪ್ಪ ಗೌಡ,ನಳಿನಾಕ್ಷ ಹಿರಿಯಡ್ಕ, ವಿಜಯಕುಮಾರ್ ಚಾರ್ಮಾತ, ಕೇಶವ ಹೊಸೊಳಿಕೆ, ವೇಣುಕುಮಾರ್ ಚಿತ್ತಡ್ಕ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಿತಿ ಎಲ್ಲ ಪದಾಧಿಕಾರಿಗಳು, ವಲಯದ ಸೇವಾ ಪ್ರತಿನಿಧಿಗಳು ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರು,ಹಾಗೂ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.
ಒಕ್ಕೂಟಗಳ ಸದಸ್ಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಏರ್ಪಡಿಸಿ, ಸ್ವಸಹಾಯ ಸಂಘಗಳ ನಡುಗಲ್ಲು ಒಕ್ಕೂಟ ಪ್ರಥಮ ಬಹುಮಾನ. ಹಾಗೂ ಹಾಲೆಮಜಲು ಒಕ್ಕೂಟ ದ್ವಿತೀಯ ಬಹುಮಾನ.
ಪ್ರಗತಿ ಬಂದು ಸಂಘಗಳಲ್ಲಿ ನಾಲ್ಕೂರು ಶೌರ್ಯ ಘಟಕ ಪ್ರಥಮ, ಹಾಗೂ ಹಾಲೆಮಜಲು ಒಕ್ಕೂಟದ ಸದಸ್ಯರು ದ್ವಿತೀಯ ಬಹುಮಾನ ಪಡೆದರು. ವಿಜೇತರಿಗೆ ಸಮಿತಿ ವತಿಯಿಂದ ಬಹುಮಾನ ವಿತರಿಸಲಾಯಿತು.

ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು. .ಗುತ್ತಿಗಾರು ವಲಯ ಮೇಲ್ವಿಚಾರಕ ರಾಜೇಶ್ ಅವರು ವಲಯದ ವರದಿ ವಾಚಿಸಿದರು.ಕಿಶೋರ್ ಕುಮಾರ್ ಪೈಕ ಹಾಗೂ ಹರಿಶ್ಚಂದ್ರ ಕುಳ್ಳಂಪ್ಪಾಡಿ ನಿರ್ವಹಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading