Ad Widget

ಸೇವಾ ನಿವೃತ್ತಿಗೊಂಡ ಯೋಧ ಹರೀಶ್ಚಂದ್ರ ಬೊಳುಗಲ್ಲು ಅವರಿಗೆ ಊರವರಿಂದ ಸ್ವಾಗತ

ಮಂಡೆಕೋಲು ಗ್ರಾಮದ ಬೊಳುಗಲ್ಲು ಹರೀಶ್ಚಂದ್ರ ರವರು ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ್ದು ಊರವರು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ದು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.

ಗ್ರಾಮ ಪಂಚಾಯತ್, ಸಹಕಾರಿ ಸಂಘ ಹಾಗೂ ಊರವರು ಮಾಲಾರ್ಪಣೆಗೈದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಉಪಾಧ್ಯಕ್ಷೆ ಪ್ರತಿಮಾ, ಅರೆಭಾಷೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ರಾ.ಪಂ. ಪಿಡಿಓ ರಮೇಶ್, ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ಗ್ರಾ.ಪಂ ಸದಸ್ಯರು, ಹಾಗೂ ಸಂಜೆ ಸಂಸ್ಥೆಯ ಪದಾಧಿಕಾರಿಗಳು, ನಿವೃತ್ತ ಸೈನಿಕ ಹರೀಶ್ಚಂದ್ರ ಬೊಳುಗಲ್ಲು ಕುಟುಂಬಸ್ಥರು, ಊರವರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading