Ad Widget

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ; ಏ.24 ರಿಂದ ಮೇ.02ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ

ಐವತ್ತೊಕ್ಲು ಗ್ರಾಮದ ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಎ.24ರಿಂದ ಮೇ.02 ರವರೆಗೆ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಎ.29ರಂದು ಶ್ರೀ ದೇವರ ಪ್ರತಿಷ್ಠೆ ನಡೆಯಲಿದೆ. ಆ ಪ್ರಯುಕ್ತ ಜ.04ರಂದು ಬ್ರಹ್ಮಕಲಶೋತ್ಸವ ಸಮಿತಿ ರಚನೆ ಹಾಗೂ ಸಭೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಪ್ರಕಾಶ್ ಕಂಬಳ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ದೇವಳದ ಪ್ರಧಾನ ಅರ್ಚಕರಾದ ಅಕ್ಷಯ್ ಬರ್ಲಾಯಬೆಟ್ಟು, ಪುನರ್ ನಿರ್ಮಾಣ ಸಮಿತಿ ಕಾರ್ಯದರ್ಶಿ ಕುಸುಮಾಧರ್ ಕರಿಮಜಲು, ಆಡಳಿತ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ರಚನೆ : ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇವಳದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ, ಕಾರ್ಯದರ್ಶಿಗಳಾಗಿ ಪುನರ್ ನಿರ್ಮಾಣ ಸಮಿತಿಯ ಕಾರ್ಯದರ್ಶಿಗಳಾದ ಕುಸುಮಾಧರ್ ಕರಿಮಜಲು ಹಾಗೂ ಅಶೋಕ್ ಮೇಲ್ಪಾಡಿ, ಕೋಶಾಧಿಕಾರಿಗಳಾಗಿ ಕುಶಾಲಪ್ಪ ಮೇಲ್ಪಾಡಿ ಹಾಗೂ ಪ್ರಧಾನ ಸಂಚಾಲಕರಾಗಿ ರಾಮಕೃಷ್ಣ ಸಾಯಿಕೃಪ ಆಯ್ಕೆಯಾದರು. ಹಾಗೂ ಇದೇ ಸಂದರ್ಭದಲ್ಲಿ ವಿವಿಧ ಸಮಿತಿಗಳನ್ನು ಹಾಗೂ ಸಮಿತಿಗಳಿಗೆ ಸಂಚಾಲಕರು ಮತ್ತು ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading