Ad Widget

ಚಲನಚಿತ್ರ ನಟ ಸುಮನ್ ತಲ್ವಾರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ ಜನವರಿ 6 : ಕನ್ನಡ, ತೆಲುಗು, ತುಳು ಭಾಷೆಗಳಲ್ಲಿ ನಟಿಸಿರುವ  ಖ್ಯಾತ ಹಿರಿಯ ಚಲನಚಿತ್ರ ನಟ ಸುಮನ್ ತಲ್ವಾರ್, ಪತ್ನಿ ಸಿರಿಶಾ ಹಾಗೂ ಮಗಳು ಅತೀಶ್ವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು.
ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮತ್ತು ಪಂಚಾಮೃತ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀ ದೇವಳದ ಆಡಳಿತ ಕಚೇರಿಗೆ ಆಗಮಿಸಿದ ಸುಮಂತ್ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಶಾಲು ಹೊದಿಸಿ   ಗೌರವಿಸಿದರು.
ಈ ಸಂದರ್ಭದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಸತೀಶ್ ಕೂಜುಗೋಡು, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ್ ರಾವ್ ಹಾಗೂ ಮಾಧವ ಪದೇಲ ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading