Ad Widget

ಜಾಲತಾಣದಲ್ಲಿ ಶಾಸಕರ ತೇಜೋವಧೆ – ತಾ. ಪಂ.ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಖಂಡನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಹಿಂದುಳಿದ ಸಮುದಾಯದಿಂದ ಬಂದು ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಇಂತಹ ಸಜ್ಜನ ಮಹಿಳಾ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಪೋಸ್ಟ್ ಹಾಕಿರುವುದು ಅತ್ಯಂತ ಖಂಡನೀಯ. ರಾಜಕೀಯ ಕ್ಷೇತ್ರದಲ್ಲಿ ಟೀಕೆಗಳು ಸಹಜ, ಪೂರ್ವಾಗ್ರಹ ಪೀಡಿತ ಮತ್ತು ಸಂಸ್ಕಾರವಿಲ್ಲದ, ಕೀಳು ಮಟ್ಟದ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲು ಸಾಧ್ಯವಿಲ್ಲ, ಅವು ವಿಕೃತ ಮನಸ್ಸಿನ ಆಲೋಚನೆಗಳ ಅತಿರೇಕರ ವರ್ತನೆಯಾಗಿದೆ. ಜಾಲತಾಣದಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ತೇಜೋವಧೆ ಮಾಡಿರುವುದು ಅತ್ಯಂತ ಗಂಭೀರ ವಿಚಾರ. ಪೋಲಿಸ್ ಇಲಾಖೆ ಕೂಡಲೇ ಸುಮೋಟು ಕೇಸ್ ದಾಖಲು ಮಾಡಿ ಅಪರಾಧಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಬ್ಬರ್ ಬೋರ್ಡ್ ಸದಸ್ಯ ಹಾಗೂ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್ ಆಗ್ರಹಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading