Ad Widget

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸೂಕ್ತ ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಬಾಜಪಾ ಮಹಾಶಕ್ತಿ ಕೇಂದ್ರದ ವತಿಯಿಂದ ಮನವಿ ಸಲ್ಲಿಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಂಟ್ವಾಳ ಸಂದೇಶ್ ಬಿಲ್ಲವ ಎಂಬ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು‌.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಧನಂಜಯ ಉಪಾಧ್ಯಕ್ಷರಾದ ರಾಜೇಶ್ ಎನ್.ಎಸ್, ಸದಸ್ಯರಾದ ಗಿರೀಶ್ ಆಚಾರ್ಯ ಪೈಲಾಜೆ, ದಿಲೀಪ್ ಉಪ್ಪಳಿಕೆ, ಸುಳ್ಯ ಭಾಜಪಾ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಕೊಂಬಾರು, ಕಾರ್ಯದರ್ಶಿ ಹರ್ಷಿತ್ ಕಾರ್ಜ, ಸುಬ್ರಹ್ಮಣ್ಯ ಭಾಜಾಪಾ ಪ್ರಮುಖರಾದ ಅಚ್ಯುತ ಗೌಡ ಕುಕ್ಕಪ್ಪನ ಮನೆ, ದಿನೇಶ್ ಸಂಪ್ಯಾಡಿ, ಶೇಖರ ದೇವರಗದ್ದೆ, ಅಶ್ವತ್ ಕೋಡಿಕಜೆ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading