Ad Widget

“ಸಹಕಾರಿ ಕ್ಷೇತ್ರದಲ್ಲಿ ಸೀತಾರಾಮ ರೈಗಳು ನಕ್ಷತ್ರವಾಗಿ ಮಿನುಗುತ್ತಿದ್ದಾರೆ” – ಈಶ್ವರಮಂಗಲದಲ್ಲಿ ಆದರ್ಶ ಸೊಸೈಟಿಯ ಶಾಖೆ ಉದ್ಘಾಟಿಸಿ ಮಾತನಾಡಿದ ಮಾಜಿ ಸಂಸದ ಕಟೀಲ್

“ಹೃದಯ ಶ್ರೀಮಂತಿಕೆಯ ಮನಸ್ಸುಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಾಗಾಗಿಯೇ ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇಂದು ಉನ್ನತ ಮಟ್ಟಕ್ಕೆ ತಲುಪಿದೆ. ಸಹಕಾರಿ ಕ್ಷೇತ್ರದಲ್ಲಿ ಸವಣೂರು ಸೀತಾರಾಮ ರೈ ಅವರು ಒಂದು ‘ನಕ್ಷತ್ರ’ ವಾಗಿ ಮಿನುಗುತ್ತಿದ್ದಾರೆ” ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.

ಅವರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು ಶನಿವಾರ ಈಶ್ವರಮಂಗಲದಲ್ಲಿ ಉದ್ಘಾಟಿಸಿ ಮಾತನಾಡಿದರು. “ಗ್ರಾಮೀಣ ಭಾಗದ ಜನತೆ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು ಎಂಬ ಉದ್ದೇಶದಿಂದ ಮಾಡಿರುವ ಜನಧನ್ ಖಾತೆಯ ಚಿಂತನೆ ಬರುವ ಮೊದಲೇ ದ.ಕ ಜಿಲ್ಲೆಯ ಶೇ.80 ಮಂದಿ ಸಹಕಾರಿ ಸಂಘಗಳಲ್ಲಿ ಖಾತೆ ಹೊಂದಿದ್ದರು. ಇದು ಸಹಕಾರಿ ಕ್ಷೇತ್ರದ ಹೆಮ್ಮೆ. ದ.ಕ ಜಿಲ್ಲೆ ಸಹಕಾರಿ ಕ್ಷೇತ್ರದ ಕಾಶಿ” ಎಂದು ಹೇಳಿದರು.

ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, “ಸಹಕಾರ ಕ್ಷೇತ್ರದ ಆಳವಾದ ಜ್ಞಾನ ಹೊಂದಿರುವ ಸೀತಾರಾಮ ರೈ ಅವರ ನೇತೃತ್ವದ ಆದರ್ಶ ಸೊಸೈಟಿ ತನ್ನ ಹೆಸರಿಗೆ ಅನ್ವರ್ಥವಾಗಿದೆ. ದೇಶದಲ್ಲೇ ಒಂದೇ ರೀತಿಯ ಸಹಕಾರಿ ಬೈಲಾ ಹಾಗೂ ಸಾಫ್ಟ್‌ವೇರ್ ಅಳವಡಿಕೆಯ ಮೂಲಕ ಸರ್ಕಾರದ ಮಾರ್ಗದರ್ಶನವೂ ಈ ಕ್ಷೇತ್ರಕ್ಕೆ ದೊರಕುತ್ತಿದೆ” ಎಂದರು.
ಪ್ರಥಮ ಠೇವಣಿ ಪತ್ರವನ್ನು ಬಿಡುಗಡೆ ಮಾಡಿದ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಸಹಕಾರಿ ಕ್ಷೇತ್ರದಲ್ಲಿ ಸಾಧಿಸುತ್ತಿರುವ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ಅಧ್ಯಕ್ಷ ಹಾಗೂ ಸಹಕಾರ ರತ್ನ ಸವಣೂರು ಯ.ಕೆ ಸೀತಾರಾಮ ರೈ, “ಕಳೆದ 58 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. 2002ರಲ್ಲಿ ಆರಂಭಗೊಂಡ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಆರಂಭದಿಂದಲೇ ಸದಸ್ಯರಿಗೆ ನಿರಂತರ ಡಿವಿಡೆಂಡ್ ನೀಡುತ್ತಾ ಯಶಸ್ಸು ಸಾಧಿಸಿದೆ. ಬೇರೆ ಜಿಲ್ಲೆಗಳಿಗೆ ಶಾಖೆಗಳ ವಿಸ್ತರಣೆಯೊಂದಿಗೆ ಸವಣೂರಿನಲ್ಲಿ 6 ಕೋಟಿ ವೆಚ್ಚದಲ್ಲಿ ಮುಖ್ಯ ಕಚೇರಿ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಮುಂದಿನ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಸಿಬ್ಬಂದಿಯಾಗಿದ್ದು ಪಾಟ್ನಾದಲ್ಲಿ ನಡೆದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ತಂಡವನ್ನು ಮುನ್ನಡೆಸಿದ ಸಾಧನೆ ಮಾಡಿದ ಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.
ಇತ್ತೀಚೆಗೆ ನಿಧನರಾದ ಸಂಘದ ಸಿಬ್ಬಂದಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಅಶ್ವಿನ್.ಎಲ್ ಶೆಟ್ಟಿ, ಜೈರಾಜ್ ಭಂಡಾರಿ ನೊಣಾಲು, ಜಯಪ್ರಕಾಶ್ ರೈ, ರವೀಂದ್ರನಾಥ ಶೆಟ್ಟಿ ಕೇನ್ಯ, ಬಾಪು ಸಾಹೇಬ್, ರಶ್ಮಿ ಎಸ್. ರೈ, ವಿ.ವಿ. ನಾರಾಯಣ ಭಟ್, ಸಹಾಯಕ ಮಹಾ ಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಅತಿಥಿಗಳನ್ನು ಗೌರವಿಸಿದರು.

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಬಿ, ಜಯರಾಮ್ ರೈ ಬಳಜ್ಜ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೌಝಿಯಾ ಇಬ್ರಾಹಿಂ ಕೆ, ಕಟ್ಟಡದ ಮಾಲಕ ಗಣೇಶ್ ರೈ, ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ನೂತನ ಶಾಖೆಯ ವ್ಯವಸ್ಥಾಪಕಿ ರಕ್ಷಾ, ಮಹಾಪ್ರಬಂಧಕ ವಸಂತ ಜಾಲಾಡಿ ಹಾಗೂ ಪಾಂಡೇಶ್ವರ ಶಾಖೆಯ ಪ್ರಭಾರ ವ್ಯವಸ್ಥಾಪಕಿ ಮಹಾಲಕ್ಷ್ಮೀ ಕೆ. ಉಪಸ್ಥಿತರಿದ್ದರು.

ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ ಮತ್ತು ಸಂಘದ ಪಾಂಡೇಶ್ವರ ಶಾಖಾ ವ್ಯವಸ್ಥಾಪಕಿ ಮಹಾಲಕ್ಷ್ಮಿ ಕಾಠ್ಯಕ್ರಮ ನಿರೂಪಿಸಿದರು.
ಶಾಖಾ ವ್ಯವಸ್ಥಾಪಕಿ ರಕ್ಷಾ ಡಿಜೆ ವಂದಿಸಿದರು.
ಸುಳ್ಯ ಶಾಖೆಯ ಸಿಬ್ಬಂದಿ ಶ್ರೀಮತಿ ಪ್ರಿಯಾ ಬಿ.ವಿ ಪ್ರಾರ್ಥನೆಗೈದರು.
ಸಂಘದ ಸಹಾಯಕ ಮಹಾಪ್ರಬಂಧಕ ಸುನಾಥ್ ರಾಜ್ ಶೆಟ್ಟಿ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading