Ad Widget

ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷ ಪೂರೈಸಿದ ಹಿನ್ನೆಲೆ ತಾಲೂಕಿನ ವಿವಿಧೆಡೆ ಹಿಂದೂ ಸಂಗಮ ಆಯೋಜನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಅಂಗವಾಗಿ ಸುಳ್ಯ ತಾಲೂಕಿನ ೧೪ ಮಂಡಲಗಳಲ್ಲಿ ಜ.೧೮ ರಿಂದ ಫೆ.೨ ರವರೆಗೆ ಹಿಂದೂ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸುಳ್ಯ ಗಿರಿದರ್ಶಿನಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಸಂಗಮ ಸುಳ್ಯ ತಾಲೂಕು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ಎಂ.ಬಿ.ಸದಾಶಿವರವರು ಮಾತನಾಡಿ “ನಮ್ಮ ದೇಶದ ಅಭಿವೃದ್ಧಿ ಗ್ರಾಮ ಮಟ್ಟದಲ್ಲಿ ಬೆಳೆಯಬೇಕಾಗಿದೆ. ಸಮಾಜದಲ್ಲಿ ಸಾಂರಸ್ಯ ಮೂಡಿಸುವ ಸಲುವಾಗಿ ಪ್ರತಿಯೊಬ್ಬ ಕಾರ್ಯಕರ್ತರು ಗ್ರಾಮ ಗ್ರಾಮದ ಮನೆಗಳಿಗೆ ತೆರಳಿ ಸಂಗಮದ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದರು.

ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಸ್.ಪಿ.ಯವರು ಮಾತನಾಡಿ ಸುಳ್ಯದ ೧೪ ಮಂಡಲಗಳಲ್ಲಿ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮದ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಸಲಹೆಗಾರರಾದ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಮತ್ತು ಯಶೋದಾ ರಾಮಚಂದ್ರ, ಸಂಚಾಲಕ ಚಂದ್ರಶೇಖರ ನಲ್ಲೂರಾಯ ಹಾಗೂ ಸಮಿತಿಯ ಸಂಚಾಲಕರು ಹಾಗೂ ಉಪ ಸಂಚಾಲಕರುಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading