Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಕರ ಸಂಕ್ರಾತಿ ರಥೋತ್ಸವ

ಸುಬ್ರಹ್ಮಣ್ಯ : ಮಹತೋಭಾರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಕರ ಸಂಕ್ರಮಣದಂದು ನಡೆಯುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕುಕ್ಕೆಲಿಂಗ ಜಾತ್ರೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ   ಕುಕ್ಕೆ ಸುಬ್ರಹ್ಮಣ್ಯ ದೇವರ ವೈಭವದ ಸಂಕ್ರಾತಿ ರಥೋತ್ಸವ ಜರುಗಿತು.
ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿದಿವಿಧಾನ ನೆರವೇರಿಸಿದರು.
  
ಮುಂಜಾನೆ ರಥಬೀದಿಗೆ ಆಗಮಿಸಿದಾಗ ಕ್ಷೇತ್ರ ರಕ್ಷಕಿ ಹೊಸಳಿಗಮ್ಮ ಶ್ರೀ ದೇವರನ್ನು ಎದುರುಗೊಂಡು ನುಡಿಗಟ್ಟು ಸಮರ್ಪಣೆಯಾಯಿತು. ಬಳಿಕ  ದೇವರು ಚಿಕ್ಕರಥದಲ್ಲಿ ಆರೂಢರಾದರು. ರಥದಲ್ಲಿ ಶ್ರೀ ದೇವರಿಗೆ ಅರ್ಚಕರು ಪೂಜೆ ನೆರವೇರಿಸಿದರು. ನಂತರ ರಥೋತ್ಸವವವು ರಥಬೀದಿ ವೃತ್ತದ ತನಕ ನಡೆಯಿತು. ನಂತರ ಶ್ರೀ ದೇವರು ಪಾಲಕಿಯಲ್ಲಿ ಸವಾರಿ ಮಂಟಪಕ್ಕೆ ತೆರಳಿದರು. ಸವಾರಿ ಮಂಟಪದ  ಸಂಕ್ರಮಣ ಕಟ್ಟೆಯಲ್ಲಿ ಶ್ರೀ ದೇವರ ಕಟ್ಟೆಪೂಜೆ ನೆರವೇರಿತು. ನಂತರ ಶ್ರೀ ದೇವಳದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ಮಯೂರ ವಾಹನ ಕುಕ್ಕೆಸುಬ್ರಹ್ಮಣ್ಯನಿಗೆ ಪೂಜೆ ನೆರವೇರಿತು.

ಬುಧವಾರ ರಾತ್ರಿ ಕುಕ್ಕೆಲಿಂಗ ದೇವರ ಜಾತ್ರೋತ್ಸವದ ಪ್ರಯುಕ್ತ ದೇವರ ಉತ್ಸವಾಧಿಗಳು ಹೊರಾಂಗಣದಲ್ಲಿ ನೆರವೇರಿತು. ಈ ಸಂದರ್ಭ ಕಾಚುಕುಜುಂಬ ದೈವದ ನಡಾವಳಿ ನಡೆಯಿತು. ನಂತರ ಶ್ರೀ ದೇವರ ಬಂಡಿ ರಥೋತ್ಸವ ಹಾಗೂ ಪಾಲಕಿ ಉತ್ಸವ ನಡೆಯಿತು. 
 
ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್.ಇಂಜಾಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ವೈ.ರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ, ಲೀಲಾ ಮನಮೋಹನ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading