Ad Widget

ಪಂಜದಲ್ಲಿ ಮೇಳೈಸಿದ ರಾಜ್ಯಮಟ್ಟದ ಯುವ ಸಂಭ್ರಮ – ರಾಜ್ಯ ಯುವ ಪ್ರಶಸ್ತಿ ಹಾಗೂ ಸಾಂಘಿಕ ಪ್ರಶಸ್ತಿ ಪ್ರದಾನ :
“ಯುವ ಜನತೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ” – ಭರತ್ ಮುಂಡೋಡಿ
“ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕಿದೆ” – ಟಿ.ಎಂ.ಶಹೀದ್

“ಯುವ ಜನತೆ  ಸಮಾಜಮುಖಿ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ ಮೊಬೈಲ್ ಗೀಳು ಬಿಟ್ಟು ಬದುಕಿದರೇ ಈ ದೇಶಕ್ಕೆ ಭವಿಷ್ಯ ಇದೆ” ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ ಕಾರ್ಯಕ್ರಮದ ಬಗ್ಗೆ  ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರೂ ಸ್ವಚ್ಚತೆ ಹಾಗೂ ಶಿಸ್ತಿನ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು” ಎಂದರು.

ಪಂಜ ಪೇಟೆಯಿಂದ ನಡೆದ ನಡೆದ ಮೆರವಣಿಗೆಯನ್ನು ಉದ್ಘಾಟಿಸಿ ಕರ್ನಾಟಕ ಸರಕಾರದ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಮಾತನಾಡಿ “ವಿಶ್ವವನ್ನೇ ಗಮನಸೆಳೆದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕಿದೆ. ಯುವ ಶಕ್ರಿಯನ್ನು ಕೋಮವಾದಕ್ಕೆ ಉಪಯೋಗಿಸಿದರೇ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯುವಕರು ಮುಂದೆ ಬಂದು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಯುವಜನತೆಗೆ ನೆರವಾಗಲು ಸರಕಾರ ಆಯೋಗ ರಚನೆ ಮಾಡಬೇಕು” ಎಂದರು.

ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.
ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ್, ಮಾಜಿ ಜಿ.ಪಂ.ಅಧ್ಯಕ್ಷ ವೆಂಕಟ್ ದಂಬೆಕೋಡಿ, ಬೆಳ್ತಂಗಡಿಯ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ.ಪುಷ್ಪಗಿರಿ ಉರುವಾಲು,  ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ದೇವರಾಜ್ ಮುತ್ಲಾಜೆ, ಯುವಜನ ಸೇವಾ ಸಂಘದ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ್ ಕಿನ್ನಿಕುಮೇರಿ, ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ಸೂಡಿಮುಳ್ಳು, ಯುವಜನ ಸಂಯುಕ್ತ ಮಂಡಳಿಯ ಪ್ರ.ಕಾರ್ಯದರ್ಶಿ ಮುರಳಿ ನಳಿಯಾರು, ಕೋಶಾಧಿಕಾರಿ ಲೋಹಿತ್ ಬಾಳಿಕಳ, ಎಸ್.ಆರ್.ಕೆ.ಲ್ಯಾಡರ್ಸ್ ನ ಕೇಶವ ಗೌಡ ಅಮೈ, ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ, ಡಾ.ರಾಮಯ್ಯ ಭಟ್, ರಾಕೇಶ್ ರೈ ಕೆಡೆಂಜಿ, ಡಾ.ಎನ್.ಬಾಲಾಜಿ, ಮಾಧವ ಗೌಡ ಜಾಕೆ, ಸಂತೋಷ್ ಜಾಕೆ, ಯುವ ಉದ್ಯಮಿ ಜೆಸೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ, ಯುವ ಸಂಭ್ರಮದ ಸಂಘಟನಾ ಸಮಿತಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಯುವ ಸಂಭ್ರಮದ ಸ್ವಾಗತ ಸಮಿತಿ ಸಂಚಾಲಕ ಮಾಧವ ಗೌಡ ಜಾಕೆ, ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 31ಜಿಲ್ಲೆಯ ಯುವಕ ಯುವತಿಯರಿಗೆ ರಾಜ್ಯ ಯುವ ಪ್ರಶಸ್ತಿ ಹಾಗೂ ಸಾಂಘಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ “ಸುಳ್ಯದಲ್ಲಿ ಎಲ್ಲಾ ಕ್ಷೇತ್ರಕ್ಕೆ ನಾಯಕರ ಬೆಳೆಸಿದ ಹೆಮ್ಮೆ ಯುವಜನ ಸಂಯುಕ್ರ ಮಂಡಳಿಗೆ ಇದೆ” ಎಂದರು.

ಆಶಯಗೀತೆ ಬಾಬ್ಲುಬೆಟ್ಟು ರಮ್ಯ, ಆರಾಧನಾ, ಆಧ್ಯ  ಹಾಡಿದರು.

ಯುವಜನ ಸಂಯುಕ್ತ ಮಂಡಳಿ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಸ್ವಾಗತಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading