Ad Widget

ಕುಲ್ಕುಂದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ, ವಿಚಾರಗೋಷ್ಠಿ ಹಾಗೂ ಪರಿಕರಗಳ ಪ್ರಾತ್ಯಕ್ಷತೆ

ಸುಬ್ರಹ್ಮಣ್ಯ ಜನವರಿ 19 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ಶ್ರೀ ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲಕುಂದ,ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಸುಬ್ರಹ್ಮಣ್ಯ ಮಠ, ಗ್ರಾಮ ಸುಬ್ರಹ್ಮಣ್ಯ  ಪಂಚಾಯತ್, ಪಶು ಆಸ್ಪತ್ರೆ ಸುಬ್ರಹ್ಮಣ್ಯ, ಯೇನೆಕಲ್ಲು, ಐನೆಕಿದು, ಬಳ್ಪ, ಕಾಯರ್ತಡ್ಕ, ಬೀದಿಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಯುಕ್ತ ಆಶ್ರಯದಲ್ಲಿ ಜನವರಿ 19 ಸೋಮವಾರದಂದು “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಹಾಗೂ ವಿಚಾರಗೋಷ್ಠಿ ಮತ್ತು ಪರಿಕರಗಳ ಪ್ರಾತ್ಯಕ್ಷಿಕೆ” ಶ್ರೀ  ಬಸವೇಶ್ವರ ದೇವಸ್ಥಾನ ಬಸವನ ಮೂಲ ಕುಲ್ಕುಂದದಲ್ಲಿ ನಡೆಯಿತು.

ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ಗಣೇಶ ದೀಕ್ಷಿತ್ ಅವರು ಗೋವುಗಳಿಗೆ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪ್ರದರ್ಶನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಭರತ್ ನೆಕ್ರಾಜೆ ಗೋವುಗಳಿಗೆ ಹೂವಿನ ಹಾರ ಹಾಕುವುದರ ಮೂಲಕ ಉದ್ಘಾಟಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಕಲ್ಲಾಜೆ ವಹಿಸಿದ್ದರು.

ಉದ್ಘಾಟನೆಯನ್ನು ದೀಪ ಪ್ರಜ್ವಲನೆ ಮೂಲಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾl ಅರುಣ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾl ಸತೀಶ್ ರಾವ್.ಡಿ.ಆರ್, ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಗಿರಿಧರ ಸ್ಕಂದ, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ಕಡಬ ಕೆ.ಡಿ.ಪಿ ಸದಸ್ಯರಾದ ಶಿವರಾಮ ರೈ, ಮಾಸ್ಟರ್ ಪ್ಲಾನ್ ಸದಸ್ಯರಾದ ಪವನ್, ಸುಬ್ರಹ್ಮಣ್ಯ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಕೃಷ್ಣಪ್ರಸಾದ್, ಸುಬ್ರಹ್ಮಣ್ಯ, ಯೇನೆಕಲ್ಲು, ಐನೆಕಿದು, ಬಳ್ಪ, ಕಾಯರ್ತಡ್ಕ, ಬೀದಿಗುಡ್ಡೆ, ಷೇರು, ಕೆಂಜಾಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ ಪಶು ಆಸ್ಪತ್ರೆಯ ಆಡಳಿತ ಪಶುವೈದ್ಯಾಧಿಕಾರಿಗಳಾದ ಡಾ. ನಿತಿನ್ ಪ್ರಭು ಹಾಗೂ ಕಡಬ ಪಶು ಕಚೇರಿಯ ವಿಸ್ತರಣಾಧಿಕಾರಿಗಳಾದ ನಿರಂಜನ್ ಬಿ.ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಷ ತಳಿ ಕರುಗಳ ಪ್ರದರ್ಶನದಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಸುಮಾರು 70 ಕರುಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು.
ಮೂರು ವಿಭಾಗಗಳಾದ ಜೆರ್ಸಿ, ಎಚ್.ಎಫ್, ಹಾಗೂ ದೇಶಿ ತಳಿಗಳಲ್ಲಿ 0 ಇಂದ 4-5-8 ಹಾಗೂ 9 ರಿಂದ 12 ತಿಂಗಳಂತೆ ಮೂರು ಮೂರು ವಿಭಾಗಗಳಲ್ಲಿ ಬಹುಮಾನ ನೀಡಲಾಯಿತು. 

ನಿರ್ಣಾಯಕರುಗಳಾಗಿ ಡಾ. ಕೇಶವ ಸುಳ್ಳಿ, ಡಾ.ಮೇಘಶ್ರೀ ಪಾಲ್ಗೊಂಡಿದ್ದರು.
ಅಲ್ಲದೆ ಭಾಗವಹಿಸಿದ ಎಲ್ಲಾ ಕರುಗಳಿಗೆ ಪ್ರೋತ್ಸಾಹಕ ಬಹುಮಾನವನ್ನು ನೀಡಲಾಯಿತು.

ಸುಬ್ರಹ್ಮಣ್ಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಮಲ್ಲಿಕಾ ಸ್ವಾಗತಿಸಿ ವಂದಿಸಿದರು. ಡಾl ವೆಂಕಟಚಲಪತಿ ಸಹಕರಿಸಿದರು.

ನಿವೃತ್ತ ಉಪನ್ಯಾಸಕರಾದ ವಿಶ್ವನಾಥ ನಡುತೋಟ ಹಾಗೂ ಪ್ರಗತಿಪರ ಕೃಷಿಕರಾದ ಕಿಶೋರ್ ಕುಮಾರ್ ಕೂಜುಗೋಡು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading