Ad Widget

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜ.26ರಂದು ಆಚರಿಸಲಾಯಿತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪೇರಾಲು, ಕೆ‌.ವಿ.ಜಿ ಆಯುರ್ ಫಾರ್ಮಾ ಮತ್ತು ರಿಸರ್ಚ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪುರುಷೋತ್ತಮ ಕೆ.ಜಿ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಅಕಾಡೆಮಿಕ್ ಕೋ ಯ-ಆರ್ಡಿನೇಟರ್ ಡಾ. ಕವಿತಾ ಬಿ.ಎಂ, ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಸನತ್ ಕುಮಾರ್ ಡಿ.ಜೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರದ್ವಾಜ್.ಬಿ ಹಾಗೂ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading