Ad Widget

ಪಂಜ ಶಾಲೆಯಲ್ಲಿ ಮಕ್ಕಳೊಂದಿಗೆ ಎಸ್.ಐ ಸಂವಾದ ಕಾರ್ಯಕ್ರಮ

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜ.27ರಂದು ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.

ಮಧ್ಯಾಹ್ನ ಶಾಲೆಗೆ ಭೇಟಿ ನೀಡಿದ ಪೊಲೀಸ್ ಉಪನಿರೀಕ್ಷಕರನ್ನು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಬರಮಾಡಿಕೊಂಡರು.
ನಂತರ ಕ್ಲಾಸ್ ರೂಮ್‌ಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.
ಮಕ್ಕಳ ಸುರಕ್ಷತೆ ಬಗ್ಗೆ, ಶಿಸ್ತು ಬಗ್ಗೆ ಹಾಗೂ ಜನರಲ್ ನಾಲೆಡ್ಜ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರ ಬಗ್ಗೆ ಎಸ್.ಐ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹಾಗೂ ಶಾಲೆಯ ಮೂಲಭೂತ ಸೌಕರ್ಯಗಳು, ಇನ್ನಿತರ ಸೌಲಭ್ಯಗಳು, ಪಾಠ ಪ್ರವಚನಗಳ ಬಗ್ಗೆ ಕೇಳಿ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ ಟಿ ಹಾಗೂ ಸಹ ಶಿಕ್ಷಕರಾದ ಗುಲಾಬಿ ಎ, ನೇತ್ರಾವತಿ ಎ.ಆರ್, ಮಂಜುಳಾ ಎ.ಎಸ್, ಚೇತನ ಕುಮಾರಿ ಎಚ್.ಸಿ, ವಿನುತಾ ರೈ ಶಿವಾನಂದ, ವಿನುತಾ ರೈ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading