Ad Widget

ಸಚಿವರೇ ನೀವು ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಹೇಗಿದೆ ನೋಡದೇ ಖಾಸಗಿ ಆಸ್ಪತ್ರೆಗೆ ಭೇಟಿ ನೀಡುವುದು ನ್ಯಾಯ ಸಮ್ಮತವೇ?

ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಲವಾರು ಕೊರೋನಾ ಸೋಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ಇದರಲ್ಲಿ ಹಲವಾರು ಮಂದಿ ಗುಣಮುಖರಾಗಿ ತೆರಳಿದ್ದಾರೆ. ಬಡವರು ಅಧಿಕ ಹಣವನ್ನು ಚಿಕಿತ್ಸೆಗಾಗಿ ವೆಚ್ಚ ಭರಿಸಲು ಸಾಧ್ಯವಾಗದೆ ಇರುವವರು ಸರ್ಕಾರಿ ಆಸ್ಪತ್ರೆಯನ್ನೇ ನಂಬಿರುತ್ತಾರೆ.
ಆದರೆ ನಮ್ಮ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುಚ್ಛಕ್ತಿ ಉತ್ಪಾದನೆಯ ಸೋಲಾರ್ ನೀರಿನ ಟ್ಯಾಂಕ್ ಗಳು ಲಕ್ಷಾಂತರ ರೂಪಾಯಿಯ ವಸ್ತುಗಳು ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಆದರೂ ಕೂಡ ಸರ್ಕಾರಿ ಆಸ್ಪತ್ರೆಯಲ್ಲಿ ಸ್ನಾನಕ್ಕೆ ಬಿಸಿನೀರು ಬಾರದೆ ಕೋವಿಡ್ 19 ರ ಹಿನ್ನೆಲೆಯಲ್ಲಿ ಜ್ವರದಿಂದ ಬಳಲುತ್ತಿರುವ ರೋಗಿಗಳು ತಣ್ಣೀರಲ್ಲಿ ಸ್ನಾನ ಮಾಡುವ ದುಸ್ಥಿತಿ ಬಂದೊದಗಿದೆ ‌. ಕನಿಷ್ಠ ಪಕ್ಷ ದಿವಸದಲ್ಲಿ ಎರಡು ಬಾರಿಯಾದರೂ ಕೋವಿಡ್ ವಿಭಾಗವನ್ನು ಸ್ಯಾನಿಟರಿ ಗೊಳಿಸಿ ಸ್ವಚ್ಛತೆ ಗೊಳಿಸಬೇಕಾದಲ್ಲಿ ಎರಡು ಅಥವಾ ಮೂರು ದಿನಕ್ಕೊಮ್ಮೆ ಸ್ವಚ್ಛಗೊಳಿಸುವುದು ಕಂಡುಬರುತ್ತಿದೆ. ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆಗಳ ಪರಿಶೀಲನೆ ನಡೆಸಬೇಕಾದ ಜನಪ್ರತಿನಿಧಿಗಳು ಈ ಭಾಗಕ್ಕೆ ತಲೆ ಹಾಕದೆ ಇರುವುದು ವಿಪರ್ಯಾಸವೇ ಸರಿ. ಇದೀಗ ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿಯವರು ಸುಳ್ಯಕ್ಕೆ ಭೇಟಿ ನೀಡುತ್ತಿದ್ದು ಖಾಸಗಿ ಆಸ್ಪತ್ರೆಯ ಕೋವಿಡ್ ವಿಭಾಗಕ್ಕೆ ಭೇಟಿ ನೀಡುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದರೆ ಸರ್ಕಾರಿ ಆಸ್ಪತ್ರೆಗೆ ಸಚಿವರುಗಳು ಏಕೆ ಭೇಟಿ ನೀಡುವುದಿಲ್ಲ? ಇದು ನ್ಯಾಯ ಸಮ್ಮತವೇ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!