Ad Widget

ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ದಿನೇಶ್ ಅಂಬೆಕಲ್ಲು ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ

ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೆಪಿಸಿಸಿಯಿಂದ ನೇಮಕಗೊಂಡ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಅಂಬೆಕಲ್ಲು ರವರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಾಫ, ಬ್ಲಾಕ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಮಂಜುನಾಥ ಮಡ್ತಿಲ  ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಅಂಬೆಕಲ್ಲು “ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸಿ ನಂತೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಯವರು, ದ. ಕ. ಜಿಲ್ಲಾ(ಗ್ರಾಮಾಂತರ) ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿಯವರು ನನ್ನನ್ನು ನೇಮಿಸಿರುವುದು ಪಕ್ಷದ  ಕೆಲಸ ಮಾಡಲು ಸಿಕ್ಕಿದ ಅವಕಾಶ ಎಂದು ಹೇಳಿದರಲ್ಲದೆ, ನೇಮಕ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ” ಎಂದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading