Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ


ದಿನಾಂಕ:09/02/2026 ಸೋಮವಾರ

*01.🐏ಮೇಷರಾಶಿ🐏*
🌻,ಹೆಚ್ಚಿನ ಉತ್ಸಾಹ, ಶಕ್ತಿ, ಸಾಮರ್ಥ್ಯವನ್ನು ಪಡೆಯುವ ನಿಮ್ಮ ಕೆಲಸವೊಂದು ಈ ದಿನ ಕೈಗೂಡಲಿದೆ. ಸಕಾರಾತ್ಮಕವಾದ ಪ್ರಸಿದ್ಧಿಗೆ ದಾರಿ ಸುಗಮವಾಗಲಿದೆ. ಇದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತ ಅವಕಾಶ ಕೂಡಿಬರಬಹುದು. ವಿವಿಧ ಮೂಲಗಳಿಂದ ಹಣ ಬರುವುದು. ನೀವು ಬೇರೆಯವರ ಕೆಲಸಕ್ಕೆ ಗಮನ ಹರಿಸಿದರೆ ತೊಂದರೆ ಉಂಟಾಗ ಬಹುದು,
ಪರಿಹಾರ:-ನವಗ್ರಹ ಪ್ರದಕ್ಷಿಣೆ ಮಾಡಿ,
*02.🐂ವೃಷಭರಾಶಿ🐂*
🌻,ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಸಿಗಬಹುದು. ಇದರಿಂದ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಉಂಟಾಗುವುವು. ಬೇರೆಯವರೊಂದಿಗೆ ನಿಮ್ಮ ಕೆಲಸಗಳನ್ನು ಅಂತಿಮಗೊಳಿಸುವಾಗ ಅವರು ನಿಮ್ಮನ್ನು ಕೆಲವು ಸಮಸ್ಯೆಗೆ ಸಿಲುಕಿಸಬಹುದು. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಬೇಡಿ,
ಪರಿಹಾರ :-ನಿಮ್ಮ ಕುಲದೇವರ ಪ್ರಾರ್ಥನೆ ಮಾಡಿ,
*03.🧚‍♀️ಮಿಥುನ ರಾಶಿ🧚‍♀️*
🌻,ನಿಮ್ಮ ಒಳಮನಸ್ಸಿನ ಮಹತ್ವಾಕಾಂಕ್ಷೆಗಳಾದ ಅಧಿಕಾರ ಮತ್ತು ಜನಪ್ರಿಯತೆಗಳು ನಿಮ್ಮ ಆತುರದಿಂದ ಹಾಳಾಗುವುವು. ಈ ಬಗ್ಗೆ ಯೋಚಿಸಿ ಹೆಜ್ಜೆಯನ್ನಿಡಿ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಒಡಹುಟ್ಟಿದವರೊಂದಿಗೆ ಯಾವುದೇ ಜಗಳವಾಡುವುದನ್ನು ನೀವು ಇಂದು ತಪ್ಪಿಸಬೇಕು, ಪರಿಹಾರ:-ಶ್ರೀದುರ್ಗಾಪರಮೇಶ್ವರಿಯನ್ನುಪೂಜಿಸಿ.
*04.🦀ಕಟಕ ರಾಶಿ🦀*
🌻,ಉತ್ತಮ ವಿಚಾರವಾಗಿ ನೀವು ಒಳ್ಳೆಯ ನೆರೆಹೊರೆಯವರನ್ನು ಗೆಳೆಯರನ್ನಾಗಿ ಪಡೆದುಕೊಳ್ಳುವಿರಿ. ನೀವಾಡುವ ಮಾತುಗಳಿಂದ ಅವರು ಪ್ರಭಾವಿತರಾಗಿ ನಿಮಗೆ ಸಹಾಯ ನೀಡುವರು ಮಕ್ಕಳ ಆಟಪಾಠಗಳಿಂದ ಸಂತೋಷ ಹೊಂದುವಿರಿ. ಕೆಲವು ನಿಮ್ಮ ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳುತ್ತದೆ,
ಪರಿಹಾರ:-ನಿಮ್ಮ ತಂದೆ ತಾಯಿಯ ಆಶೀರ್ವಾದ ಪಡೆಯಿರಿ,
*05.🦁ಸಿಂಹ ರಾಶಿ🦁*
🌻,ಉತ್ತಮ ಸಮಾಜದ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಗಳಿಸುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹ ಹಸ್ತಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ ಎದುರಾಗುವುವು ಮತ್ತು ನೀವು ಯಾವುದೇ ಈ ಹಿಂದೆ ಹೂಡಿಕೆಯನ್ನು ಮಾಡಿದ್ದರೆ, ಅದರಲ್ಲಿ ನಿಮಗೆ ಲಾಭವಾಗುವುದು,
ಪರಿಹಾರ:- ಶ್ರೀ ಗುರು ಸಿದ್ದಲಿಂಗೇಶ್ವರರ ಪ್ರಾರ್ಥನೆ ಮಾಡಿ,
*06.👩‍🦰ಕನ್ಯಾ ರಾಶಿ👩‍🦰*
🌻,ಅನೇಕ ರೀತಿಯ ಬದಲಾವಣೆಗಳ ಕುರಿತು ನೀವು ಮರು ಚಿಂತನೆ ಮಾಡಬೇಕಾಗಿದೆ. ಮಕ್ಕಳು ಮಾಡುವ ತಪ್ಪಿಗೆ ನಿಮಗೆ ಬೇಸರವುಂಟಾಗುವುದು. ಕುಟುಂಬದಲ್ಲಿ ಕಲಹಗಳ ಸಾಧ್ಯತೆ, ಇಂದು ನಿಮಗೆ ಹಣಕಾಸಿನ ಸಮಸ್ಯೆಗಳನ್ನು ತರುತ್ತದೆ, ನೀವು ಮೊದಲು ಯಾವುದೇ ಹೂಡಿಕೆ ಮಾಡಿದ್ದರೆ, ಅದರಿಂದ ನೀವು ನಷ್ಟವನ್ನು ಭರಿಸಬೇಕಾಗಬಹುದು. ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ,
ಪರಿಹಾರ:-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.,
*07.⚖️ತುಲಾ ರಾಶಿ⚖️*
🌻,ಅಧ್ಯಾತ್ಮದ ಓದು ಹೊಸ ರೀತಿಯ ಚಿಂತನೆಗಳಿಗೆ ನಿಮ್ಮನ್ನು ಸಂವೇದಿಸಲು ಸೂಕ್ತವಾದ ದಿನವಾಗಿದೆ. ನಿಮ್ಮ ಮನಸ್ಸಿನ ತಾಕಲಾಟಕ್ಕೆ ಅಧ್ಯಾತ್ಮದ ಓದು ಪರಿಹಾರ ಸೂಚಿಸಬಲ್ಲದು. ಆದಷ್ಟು ಮೌನವನ್ನು ಆಚರಿಸುವುದು ಒಳ್ಳೆಯದು. ಸಾಮಾಜಿಕ ಜೀವನವು ಇಂದು ಸುಖಮಯವಾಗಿರುವುದು ಜನರು ನಿಮ್ಮ ಇಂದು ನಿಮ್ಮ ಸೇವೆಯನ್ನು ಬಯಸುವರು,
ಪರಿಹಾರ:- ನಿಮ್ಮ ಕುಲ ಗುರುಗಳ ದರ್ಶನ ಮಾಡಿ,
*08.🦂ವೃಶ್ಚಿಕ ರಾಶಿ🦂*
🌻,ನಿಮ್ಮದೇ ಅದ ವಿಶೇಷ ಆಲೋಚನೆಗಳು ನಿಮಗೆ ಧನಲಾಭ ವಿಚಾರದಲ್ಲಿ ಬೆಂಬಲಿಸಬಲ್ಲವು. ನಿಮ್ಮ ಆತ್ಮೀಯ ಗೆಳೆಯರು ಇಲ್ಲವೆ ಬಂಧುಗಳು ನಿಮಗೆ ಸಹಾಯ ಹಸ್ತ ನೀಡುವರು. ಹಣಕಾಸಿನ ಪರಿಸ್ಥಿತಿ ಸುಧಾರಿಸುವುದು. ಹಣದ ವಿಷಯದಲ್ಲಿ, ನೀವು ವ್ಯವಹಾರವನ್ನು ಎಚ್ಚರಿಕೆಯಿಂದ ಮಾಡಬೇಕಾಗುತ್ತದೆ,
ಪರಿಹಾರ:-ಶ್ರೀದುರ್ಗಾಸ್ತೋತ್ರವನ್ನು ಪಠಿಸಿ,
*09.🏹ಧನುಸ್ಸು ರಾಶಿ🏹*
🌻,ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ವಸ್ತುಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಂದು ಕಳೆದುಕೊಳ್ಳಬಹುದು. ಕುಟುಂಬದಲ್ಲಿ ನೀವು ಯಾವುದೇ ನಿರ್ಧಾರವನ್ನು ಶಾಂತವಾಗಿ ತೆಗೆದುಕೊಳ್ಳಬೇಕು. ವಾಹನ ಚಾಲನೆ ಮಾಡುವಾಗ ಮತ್ತು ಪ್ರಯಾಣದಲ್ಲಿ ಎಚ್ಚರದಿಂದ ಇರಿ,
ಪರಿಹಾರ:-ನಿಮ್ಮ ಕುಲ ದೇವರ ಪ್ರಾರ್ಥನೆ ಮಾಡಿ,
*10.🐊ಮಕರ ರಾಶಿ🐊*
🌻,ಏಕಾಂತಮಯವಾದ ಸ್ಥಳವನ್ನು ಬಯಸಿ ಹೋಗಲು ಪ್ರಯತ್ನಿಸುವಿರಿ. ಆದರೆ ಒಂಟಿತನವೂ ಬೇಸರವನ್ನುಂಟು ಮಾಡುವುದು. ನಿಮ್ಮ ಒಳಗಿನ ತುಮುಲಗಳನ್ನು ಸ್ನೇಹಿತರ ಬಳಿ ಇಲ್ಲವೆ ಬಂಧುಗಳ ಬಳಿ ಹೇಳಿಕೊಂಡು ಮನಸ್ಸನ್ನು ಹಗುರ ಮಾಡಿಕೊಳ್ಳಿ., ವ್ಯಾಪಾರ ಮಾಡುವ ಜನರು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ,
ಪರಿಹಾರ:-ಶ್ರೀ ಹನುಮಂತನ ಸ್ಮರಣೆ ಮಾಡಿ,
*11.⚱️ಕುಂಭ ರಾಶಿ⚱️*
🌻,ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಾಧ್ಯತೆ ಇರುವುದು. ಉದ್ಯೋಗದಲ್ಲಿ ಉನ್ನತಿಗೆ ಸಂಬಂದಿಸಿದ ಶುಭ ಸಮಾಚಾರವನ್ನು ಪಡೆಯುವಿರಿ, ನಿಮ್ಮ ಎಲ್ಲಾ ಕೆಲಸಗಳಿಂದ ನಿಮ್ಮ ಮನಸ್ಸಿಗೆ ಇಂದು ಸಂತೋಷವಾಗಿರುತ್ತದೆ. ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ,
ಪರಿಹಾರ :-ಶ್ರೀ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ,
*12.🐬ಮೀನ ರಾಶಿ🐬*
🌻ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮ್ಮಲ್ಲಿದೆ. ಸಕಾರಾತ್ಮಕವಾಗಿ ಮುಂದುವರಿಯಿರಿ. ಭಗವಂತನು ನಿಮ್ಮ ಮೇಲೆ ಕರುಣೆ ತೋರುವನು. ವಿವಾಹ ಸಂಬಂಧ ಮಾತುಕತೆಗಳು ಫಲಪ್ರದವಾಗುವುವು, ಇಂದು ನೀವು ವ್ಯಾಪಾರ ವ್ಯವಹಾರದಲ್ಲಿ ಕೆಲವು ಸವಾಲುಗಳಿಂದ ಸಮಸ್ಯೆಗಳನ್ನು ಎದುರಿಸುತ್ತೀರಿ
ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನುಪ್ರಾರ್ಥಿಸಿ,
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading